ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು ಹೆಗಲು ಕೊಟ್ಟು ಸಂಘಟನೆಯನ್ನು ಮತ್ತಷ್ಟು ಗಟ್ಟಿಯಾಗಿ ಬೆಳೆಸಿ ನಾಡಿನಲ್ಲಿಯ ನೊಂದವರಿಗೆ ನ್ಯಾಯ ಕೊಡಿಶೋಣ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನೆಯ ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ ತಿಳಿಸಿದರು.
ನಗರದ ಟೈಲರ್ ಮಂಜಿಲ್ ಪ್ರವಾಸಿ ಮಂದಿರದಲ್ಲಿ ನಡೆದ ಸಂಘಟನೆಯ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಎಲ್ಲರು ಸಂಘಟಿತರಾಗಿ ಸಮಾಜದ ಏಳಿಗೆಗಾಗಿ ದುಡಿಯೋಣ ಎಂದರು.

ಇದೇ ಸಂದರ್ಭದಲ್ಲಿ ಕಲಬುರ್ಗಿ ವಿಭಾಗಿಯ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ,ನಮ್ಮ ಸಂಘಟನೆ ಇದುವರೆಗೆ ಅನೇಕ ಜನಪರ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದು,ತಾವೆಲ್ಲರು ಇಂದು ನೂತನ ಪದಾಧಿಕಾರಿಗಳು ಒಗ್ಗಟ್ಟಿನಿಂದ ಪ್ರತಿ ಹೋಬಳಿ,ಹಳ್ಳಿ ಗಳಲ್ಲಿಯೂ ಸಂಘಟನೆಯನ್ನು ಕಟ್ಟುವ ಮೂಲಕ ದೀನ,ದಲಿತ,ಶೋಷಿತರ ಧ್ವನಿಯಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕ ಮರುಳಸಿದ್ಧಪ್ಪ ನಾಯ್ಕಲ್,ಜಿಲ್ಲಾ ಸಂಘಟನಾ ಸಂಚಾಲಕರಾದ ಮಾಳಪ್ಪ ಕಿರದಳ್ಳಿ,ಪರಶುರಾಮ ಮಹಲರೋಜಾ,ಭೀಮರಾಯ ಬಳಿಚಕ್ರ,ಅಶೋಕ ನಾಯ್ಕಲ್,ಬಸವರಾಜ ಅಣಬಿ,ಭೀಮರಾಯ ಅಗ್ನಿ,ಶಹಾಪುರ ತಾ.ಪ್ರ.ಸಂಚಾಲಕ ಚಂದ್ರಕಾಂತ ಬಜೇರಿ,ಹಿರಿಯ ಮುಖಂಡರಾದ ಬಸವರಾಜ ಗೋನಾಳ,ಸಾಹೇಬಗೌಡ ವಾಗಣಗೇರಾ,ಚಂದ್ರು ಕಿರದಳ್ಳಿ ತಾಂಡಾ,ಸದಾಶಿವ ಕರಡಕಲ್,ಪ್ರಶಾಂತ (ಉಗ್ರಂ),ರಮೇಶ ಅರಕೇರಿ,ಸಾಯಬಣ್ಣ ಕಿರದಳ್ಳಿ,ಹಣಮಂತ ವಾಗಣಗೇರಾ,ಹೊನ್ನಪ್ಪ ಗೌಂಡಿ,ಮಲ್ಲಿಕಾರ್ಜುನ ಪರಸನಹಳ್ಳಿ,ಪರಶುರಾಮ ನಾಟೇಕಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಂಘಟನೆಯ ಜಿಲ್ಲಾ ಉಪ ಪ್ರಧಾನ ಸಂಚಾಲಕ ಮಾಳಪ್ಪ ಕಿರದಳ್ಳಿ ಎಲ್ಲಾ ನಾಯಕರ ಮಾರ್ಗದರ್ಶನದಲ್ಲಿ ಹಾಗೂ ಕಾರ್ಯಕರ್ತರ ಅಭಿಪ್ರಾಯದಂತೆ ನೂತನ ಪದಾಧಿಕಾರಿಗಳನ್ನು ಘೋಷಿಸಿದರು.ಪದಾಧಿಕಾರಿಗಳು: ಶರಣಪ್ಪ ತಳವಾರಗೇರಾ (ತಾ.ಪ್ರಧಾನ ಸಂಚಾಲಕ), ಗೊಲ್ಲಾಳಪ್ಪ ಕಟ್ಟಿಮನಿ ಕಿರದಳ್ಳಿ,ಮಲ್ಲಿಕಾರ್ಜುನ ತಳವಾರಗೇರಾ,ಪರಶುರಾಮ ಸಾಸನೂರ,ಪ್ರಕಾಶ ಕಟ್ಟಿಮನಿ,ಕೆಂಚಪ್ಪ ಕಟ್ಟಿಮನಿ,ಶರಣು ಅಂಬರಕೇಡ ಬೋನ್ಹಾಳ,ಲಾಲು ಚವ್ಹಾಣ,ಮೌನೇಶ ತೆಗ್ಗಿಹಳ್ಳಿ (ಸಂಘಟನಾ ಸಂಚಾಲಕರು), ಬಲಭೀಮ ಹಾದಿಮನಿ (ಖಜಾಂಚಿ)

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago