ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ ಅನುಕೂಲ ಮಾಡಿಕೊಡಲು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಅದೇ ರೀತಿಯಾಗಿ ಚಿತ್ತಾಪುರ ನಗರ ಘಟಕ, ತಾಲ್ಲೂಕು ಯುವ ಘಟಕ, ನಗರ ಯುವ ಘಟಕ ಮತ್ತು ಮಹಿಳಾ ಘಟಕ ಅಧ್ಯಕ್ಷರ ಅವಧಿಯೂ ಪೂರ್ಣಗೊಂಡಿದ್ದರಿಂದ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದರು.
ನನ್ನ ಮೇಲೆ ಅಪಾರ ಭರವಸೆ, ನಂಬಿಕೆ, ವಿಶ್ವಾಸವಿಟ್ಟು ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಅಯ್ಕೆ ಮಾಡಿದ ನಂತರ ಸಮಾಜದ ಸಂಘಟನೆಯಲ್ಲಿ ಸಂಪೂರ್ಣ ಸಹಾಯ, ಸಹಕಾರ ನೀಡಿದ ಸರ್ವ ಪದಾಧಿಕಾರಿಗಳ, ಸಮಾಜದ ಹಿರಿಯ ಮುಖಂಡರ, ಯುವಕರ, ಸಮಾಜದ ಜನರ ಸಹಯೋಗ ಎಂದಿಗೂ ಮರೆಯುವಂತ್ತಿಲ್ಲ ಎಂದರು.
ಅಧ್ಯಕ್ಷ ಸ್ಥಾನ ಅಲಂಕರಿಸಿದ ನಂತರ ಕೋಲಿ ಸಮಾಜದ ಸಂಘಟನೆ, ಕಾರ್ಯ ಚಟುವಟಿಕೆ, ಸಮಾಜದ ಪರವಾಗಿ ಹೋರಾಟ, ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಹಾಗೂ ಸಮುದಾಯ ಭವನ ಕಟ್ಟಡ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಎಲ್ಲರ ಸಹಕಾರದೊಂದಿಗೆ ಮಾಡಿದ ತೃಪ್ತಿಯಿದೆ. ಇನ್ನು ಮುಂದೆಯೂ ಸಹ ಕೋಲಿ ಸಮಾಜದ ಸಂಘಟನೆಯಲ್ಲಿ ಸದಾ ಪಾಲ್ಗೊಂಡು ಸಮಾಜದ ಸಂಘಟನೆಯಲ್ಲಿ ಸಕ್ರೀಯವಾಗಿರುತ್ತೇನೆ ಎಂದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…