ಪರಿಷತ್ತಿನ ಸಲಕರಣೆಗಳ ಖರೀದಿಗಾಗಿ 5 ಲಕ್ಷ ರೂ. ಅನುದಾನದ: ಎಂಎಲ್ಸಿ ಕಮಕನೂರ ಭರವಸೆ

ಕಲಬುರಗಿ: ಸದಾ ಕನ್ನಡಪರ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ಮಾಣಗೊಂಡಿರುವ ಸಾಹಿತ್ಯ ಮಂಟಪಕ್ಕೆ ಅಗತ್ಯವಿರುವ ಸಲಕರಣೆಗಳ ಖರೀದಿಗೆ ತಮ್ಮ ವ್ಯಾಪ್ತಿಯ ಅನುದಾನದಲ್ಲಿ 5 ಲಕ್ಷ ರೂ. ಗಳ ಅನುದಾನದ ನೆರವು ನೀಡುವುದಾಗಿ ವಿಧಾನ ಪರಿಷತ್ತಿನ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಭರವಸೆ ನೀಡಿದರು.

ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ರವಿವಾರ ಏರ್ಪಡಿಸಿದ ಸತ್ಕಾರ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡ ನಾಡು-ನುಡಿ ಹಾಗೂ ಸಾಂಸ್ಕøತಿಕ ಪರಂಪರೆ ಇನ್ನಷ್ಟು ಹೆಚ್ಚಿಸಿಕೊಂಡು ಬರಲು ಈ ಅನುದಾನ ಶೀಘ್ರವೇ ಮಂಜುರು ಮಾಡಿಸಿಕೊಡಲಾಗುವುದು. ಸಾಹಿತ್ಯ ಮತ್ತು ಸಮಾಜ ಸೇವೆಯಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿರುವ ಗಣ್ಯರನ್ನು ಗುರುತಿಸಿ ಗೌರವ ಸತ್ಕಾರ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಇಂಥ ಮಹನೀಯರ ಸೇವೆ ನಾಡಿನ ಜನರಿಗಾಗಿ ಮುಂದುವರಿಯಲಿ ಎಂದು ಆಶಿಸಿದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡವರ ಬದುಕು ಹಾಗೂ ಹೋರಾಟಗಳು ಎಲ್ಲರಿಗೂ ಮಾದರಿ. ಪ್ರತಿಯೊಬ್ಬರೂ ಜನ ಸೇವೆ ಮಾಡಬೇಕೆಂಬ ಹಂಬಲ ಬೆಳೆಸಿಕೊಳ್ಳಬೇಕಾಗಿದೆ. ಪರಿಷತ್ತು ಸಾಧನೆ ಮಾಡುವವರಿಗೆ ಸತ್ಕಾರಿಸುವುದರ ಜತೆಗೆ ಸಾಧನೆ ಮಾಡಲು ಪ್ರೇರಣೆ ಕೊಡುವ ಕಾರ್ಯವೂ ಸಹ ಮಾಡುತ್ತಲಿದೆ. ಸಾರ್ವಜನಿಕರ ಸಹಕಾರದೊಂದಿಗೆ ಪರಿಷತ್ತಿನ ಕಾರ್ಯಕ್ರಮಗಳು ಮುನ್ನಡೆಸಿಕೊಂಡು ಬರಲಾಗುತ್ತಿದೆ. ಅದರ ಜತೆಗೆ ಪರಿಷತ್ತಿನ ಇನ್ನುಳಿದ ಭೌತಿಕ ಕಾರ್ಯಗಳಿಗೂ ಸಹ ಆದ್ಯತೆ ನೀಡಲಾಗುವುದು ಎಂದರು.

ಪಾಲಿಕೆಯ ವಲಯ ಆಯುಕ್ತರಾದ ರಮೇಶ ಪಟ್ಟೇದಾರ, ಚರ್ಮರೋಗ ತಜ್ಞೆ ಡಾ. ರಾಜೇಶ್ವರಿ ಎಂ.ಎನ್., ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ಕಲ್ಯಾಣಕುಮಾರ ಶೀಲವಂತ, ಜ್ಯೋತಿ ಕೋಟನೂರ, ರಾಜೇಂದ್ರ ಮಾಡಬೂಳ, ಧರ್ಮರಾಜ ಜವಳಿ, ರಮೇಶ ಡಿ ಬಡಿಗೇರ, ದಿನೇಶ ಮದಕರಿ, ಡಾ. ಬಾಬುರಾವ ಶೇರಿಕಾರ, ಶಿವಶರಣ ಬಡದಾಳ, ಎಂ ಎನ್ ಸುಗಂಧಿ, ಗುರುಬಸಪ್ಪ ಸಜ್ಜನಶೆಟ್ಟಿ, ನಾಗಪ್ಪ ಎಂ ಸಜ್ಜನ್, ಎಸ್ ಕೆ ಬಿರಾದಾರ, ಸುರೇಶ ದೇಶಪಾಂಡೆ, ಸುರೇಶ ಲೇಂಗಟಿ, ಪ್ರಭು ಫುಲಾರಿ, ಚಂದ್ರಕಾಂತ ಸೂರನ್, ಮಲ್ಲಿನಾಥ ಸಂಗಶೆಟ್ಟಿ, ಡಾ. ಶೀಲಾದೇವಿ ಬಿರಾದಾರ, ಮಧೂಸೂಧನ್ ಚಿಂತನಪಳ್ಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಟಿಎಸಾರ್ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ಶ್ರೀಕಾಂತಾಚಾರ್ಯ ಮಣೂರ, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ಡಿ ಶಿವಲಿಂಗಪ್ಪ, ಗುಲಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಎಸ್ ಪಿ ಸುಳ್ಳದ್, ಮಲ್ಲಣ್ಣ ಮಡಿವಾಳ, ರಾಜೀವಗಾಂಧಿ ವಿ.ವಿ. ಯ ಸೆನೆಟ್ ಸದಸ್ಯಾದ ಡಾ. ಅರವಿಂದ ಎಸ್.ಎಚ್. ಕಟ್ಟಿ, ಮಹಿಳಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಅತೀಕ್ ಉರ್ ರೆಹಮಾನ್, ಗೌರವ ಡಾಕ್ಟರೇಟ್ ಪದವಿ ಪಡೆದ ಡಾ. ಲಕ್ಷ್ಮಣ ದಸ್ತಿ, ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ಸಿದ್ಧಲಿಂಗಯ್ಯಸ್ವಾಮಿ ಮಲಕೂಡ, ಶಂಕರಜೀ ಹಿಪ್ಪರಗಿ ಅವರನ್ನು ವಿಶೇಷವಾಗಿ ಸತ್ಕರಿಸಲಾಯಿತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

59 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago