ಕಲಬುರಗಿ : ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ಸೆ.30 ರಂದು ಬೆಳ್ಳಿಗ್ಗೆ 11-30 ಕ್ಕೆ ಕಲಬುರಗಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾದ್ಯಕ್ಷದ ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸದಸ್ಯತ್ವ ಅಭಿಯಾನದ ಜಿಲ್ಲಾ ಉಸ್ತುವಾರಿಗಳಾದ ಗುರುಮಿಠಕಲ್ ಶಾಸಕರಾದ ಶರಣಗೌಡ ಕಂದಕೂರ್, ಮಾನ್ವಿ ಮತಕ್ಷೇತ್ರದ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ್ ದೊರೆ, ಸೂರ್ಯಕಾಂತ್ ನಾಗಮಾರಪಳ್ಳಿ, ಮಾಜಿ ಸಚಿವರಾದ ಬಂಡೆಪ್ಪ ಖಾಶೇಂಪೂರ, ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದಕ್ಷರಾದ ದೊಡಪ್ಪಗೌಡ ನರಿಬೋಳ, ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಶಿವಕುಮಾರ ನಾಟಿಕಾರ ಸೇರಿದಂತೆ ರಾಜ್ಯ ಮುಖಂಡರುಗಳ ಸಮ್ಮುಖದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವದ ನೋಂದಣಿ ಅಭಿಯಾನ ಕಾರ್ಯಾಗಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷದ ರಾಜ್ಯ /ಜಿಲ್ಲಾ /ತಾಲೂಕ /ಪದಾಧಿಕಾರಿಗಳು, ತಾಲೂಕ ಅಧ್ಯಕ್ಷರುಗಳು, ವಿವಿಧ ಘಟಕದ ಅಧ್ಯಕ್ಷರುಗಳು, ಪಕ್ಷದ ಮುಖಂಡರುಗಳು, ಕಳೆದ ವಿಧಾನ ಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳು,ಹಾಗೂ ಕಾರ್ಯಕರ್ತರು,ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…