ಬೆಂಗಳೂರು: ಗುಜರಾತ್ ರಾಜ್ಯದ ಗಾಂಧಿನಗರ ಸಾಹಿತ್ಯ ಸೇವಾ ಸಂಸ್ಥಾನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ ಗಾಂಧಿ ನ್ಯಾಷನಲ್ ಪೀಸ್ ಅವಾರ್ಡ್-2024 ಪ್ರಶಸ್ತಿಗೆ ಕಲಬುರಗಿಯ ಸಾಹಿತಿ, ಕಲಾವಿದ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್ ಆಯ್ಕೆಯಾಗಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಗಾಂಧಿನಗರ ಸಾಹಿತ್ಯ ಸೇವಾ ಸಂಸ್ಥಾನ ಚಾರಿಟೇಬಲ್ ಟ್ರಸ್ಟ್ ನ ರಾಷ್ಟ್ರೀಯ ಅಧ್ಯಕ್ಷ ಡಾ.ಗುಲಾಬ್ ಚಂದ್ ಪಟೇಲ್ ಹಾಗೂ ಕರ್ನಾಟಕ ಘಟಕದ ರಾಜ್ಯ ಉಸ್ತುವಾರಿ ಡಾ.ಮಲಕಪ್ಪ (ಮಹೇಶ್) ಅವರು, ಅಕ್ಟೊಬರ್ 2 ರಂದು ಗಾಂಧಿ ಜಯಂತಿ ನಿಮಿತ್ತ ಭಾರತದಾದ್ಯಂತ ಅನೇಕ ಸಾಧಕರನ್ನು ವೈವಿಧ್ಯಮಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡಿ ಪುರಸ್ಕಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಚಿತ್ರದುರ್ಗದ ಮಾಚಿದೇವ ಮಹಾಸಂಸ್ಥಾನ ಮಠದ ಡಾ. ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿ, ಎಸ್.ಬಿ.ಕುನ್ನೂರ ಮುದ್ದೇಬಿಹಾಳ, ಹಣಮಂತಪ್ಪ ಅಗಸರ, ವಿ.ಎಚ್.ಸಿದ್ದೇಗೌಡ ಹಾಗೂ ಕಲಬುರಗಿಯ ಮಹಿಪಾಲರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…