ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ್ ಬಡಾವಣೆಯಲ್ಲಿರುವ ದಕ್ಷಿಣ ಮುಖಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಸಾಂಸ್ಕೃತಿಕ ವೈಭವ ನವರಾತ್ರಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ.
ಅ. 3ರಂದು ಸಾಯಂಕಾಲ ಸಾಂಸ್ಕೃತಿಕ ದಸರಾಗೆ ದೇವಿಯ ಮೂರ್ತಿಯನ್ನು ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ವೈಭವದ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.
ಒಂಬತ್ತು ದಿನಗಳ ಕಾಲ ದೇವಿಯ ವಿವಿಧ ಅವತಾರಗಳಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡ, ಸ್ಕಂದಮಾತಾ, ಕಾತ್ಯಾಯನಿ, ಕಾಲರಾತ್ರಿ, ಮಹಾಗೌರಿ ಹಾಗೂ ಸಿದ್ದಿಧಾತ್ರಿ ಅವತಾರಗಳಲ್ಲಿ ದೇವಿಯನ್ನು ಅಲಂಕರಿಸಿ ಪ್ರತಿನಿತ್ಯ ಪೂಜೆಯನ್ನು ನೆರವೇರಿಸಲಾಗುತ್ತದೆ.
ಬಡಾವಣೆಯ ಮಹಿಳೆಯರು ದೇವಿಯ ರೂಪಗಳಿಗೆ ಅನುಗುಣವಾಗಿ ನವದುರ್ಗಿಗೆ ಪ್ರಿಯವಾದ ಒಂಬತ್ತು ಬಣ್ಣದ ಸೀರೆಯನ್ನುಟ್ಟು ದಾಂಡಿಯಾ ನೃತ್ಯ ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ದಿನದ ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಗಣ್ಯರು, ಮಠಾದೀಶರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ದಸರಾ ಉತ್ಸವದಲ್ಲಿ ಸಮಸ್ತ ಸದ್ಭಕ್ತರು ಭಾಗವಹಿಸಿ ದೇವಿಯ ದರ್ಶನ ಪಡೆಯಬೇಕೆಂದು ಬಡಾವಣೆಯ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…