ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಪ್ರತಿಪಾದಿಸಿದ ತತ್ವಗಳು ಮಹಿಳಾ ಸಮುದಾಯದ ಸ್ವಾವಲಂಬನೆಗೆ ಪೂರಕವಾಗಿದ್ದು, ಅವರ ಜೀವನಾದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಜಯಕರ್ನಾಟಕ ಜನಪರ ವೇದಿಕೆಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಜಿ.ಎಸ್. ಪುಷ್ಪಲತಾ ತಿಳಿಸಿದ್ದಾರೆ.
ನಗರದಲ್ಲಿ ಗಾಂಧೀಜಿ ಜಯಂತಿ ಪ್ರಯುಕ್ತ ಮಾತನಾಡಿದ ಅವರು, ಗುಡಿ ಕೈಗಾರಿಕೆಗಳ ಅಭಿವೃದ್ಧಿಯಿಂದ ಮಹಿಳಾ ಸಮುದಾಯದ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂಬುದನ್ನು ಗಾಂಧೀಜಿ ಒತ್ತಿ ಹೇಳಿದ್ದಾರೆ. ಆದರೆ, ನಮ್ಮ ಕಾರ್ಪೊರೇಟ್ ಅಭಿವೃದ್ಧಿ ಕಲ್ಪನೆಗಳು ಮಹಿಳಾ ಸಮುದಾಯವನ್ನು ಜಾಹಿರಾತುಗಳಲ್ಲಿ ಮಾರಾಟದ ವಸ್ತುವಾಗಿ ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಹಾತ್ಮ ಗಾಂಧೀಜಿ ಅವರು ದೇಶದ ಸ್ವಾತಂತ್ರ್ಯ ಹಾಗೂ ಮಹಿಳಾ ಸ್ವಾತಂತ್ರ್ಯವನ್ನು ಒಟ್ಟೊಟ್ಟಿಗೆ ಪ್ರತಿಪಾದಿಸಿದವರು. ದೇಶದ ಯಾವುದೇ ಮೂಲೆಯಲ್ಲಿ ಮಹಿಳೆಯೊಬ್ಬಳು ಮಧ್ಯರಾತ್ರಿಯಲ್ಲೂ ನಿರ್ಭೀತಿಯಿಂದ ನಡೆದಾಡುವಂತಹ ಸಾಧ್ಯವಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಂತಾಗುತ್ತದೆ ಎಂದು ಆಶಿಸಿದ್ದರು. ಹೀಗಾಗಿ ಗಾಂಧೀಜಿ ಅವರ ಆಶಯದಂತೆ ಮಹಿಳಾ ಸಮುದಾಯದ ಆತ್ಮರಕ್ಷಣೆ ಸೇರಿದಂತೆ ಎಲ್ಲ ರಂಗದಲ್ಲೂ ಉತ್ತಮ ಸಾಧನೆ ಮಾಡುವ ನಿಟ್ಟಿನಲ್ಲಿ ಸೂಕ್ತ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯೆಂದು ಅವರು ಹೇಳಿದ್ದಾರೆ.
ಗಾಂಧೀಜಿ ಜಯಂತಿ ದಿನದಂದೆ ಜಯಕರ್ನಾಟಕ ಜನಪರ ವೇದಿಕೆಯು ಸ್ಥಾಪನೆಯಾಯಿತು. ಇಂದಿಗೆ ಮೂರು ವರ್ಷ ಪೂರೈಸಿ ನಾಲ್ಕನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಗುಣರಂಜನ್ ಶೆಟ್ಟಿ ಅವರು, ಗಾಂಧೀಜಿ ಅವರ ತತ್ವ ಸಿದ್ಧಾಂತಗಳಡಿಯಲ್ಲಿ ಸಂಘಟನೆಯನ್ನು ಮುನ್ನಡೆಸಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ಜೆ.ಶ್ರೀನಿವಾಸ್ ಅವರು, ಸಂಘಟನೆಯಿಂದ ರೂಪಿತಗೊಂಡ ಕಾರ್ಯಕ್ರಮಗಳನ್ನು ಅನುಷ್ಢಾನಕ್ಕೆ ತರುವಲ್ಲಿ ಹಾಗೂ ಸಂಘಟನೆಯ ಎಲ್ಲ ಕಾರ್ಯಕರ್ತರನ್ನು ಒಗ್ಗೂಡಿಸಿಗೊಂಡು ಗಾಂಧೀಜಿ ಅವರ ಆಶಯದಂತೆ ಮುನ್ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆ, ಆರೋಗ್ಯ ಶಿಬಿರ, ಉದ್ಯಮ ಶೀಲತೆಗೆ ಸಂಬಂಧಿಸಿದ ಕಾರ್ಯಗಾರಗಳನ್ನು ಆಯೋಜಿಸಿ ಯಶಸ್ವಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಲು ಈಗಾಗಲೇ ಸಿದ್ಧತೆಯಲ್ಲಿ ತೊಡಗಿದ್ದೇವೆ ಎಂದು ಅವರು ಮಾಹಿತಿ ನೀಡಿದರು.
ಇವತ್ತಿನ ಜಾಗತೀಕರಣ ಯುಗದಲ್ಲಿ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶಗಳು ವಿಫುಲವಾಗಿದ್ದು, ಮಹಿಳಾ ಸಮುದಾಯಕ್ಕೆ ಹೆಚ್ಚಿನ ಅವಕಾಶಗಳು ದೊರಕಬೇಕು. ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಮಹಿಳಾ ಸಮುದಾಯಕ್ಕೆ ಆಗುತ್ತಿರುವ ವೇತನ ತಾರತಮ್ಯವನ್ನು ನಿವಾರಿಸುವ ನಿಟ್ಟಿನಲ್ಲಿ ಈಗಾಗಲೇ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಅಭಿಯಾನವನ್ನು ನಡೆಸಲಾಗುತ್ತಿದೆ. ಇದರ ಜೊತೆಗೆ ಸರ್ಕಾರಿ ಇಲಾಖೆಗಳಲ್ಲಿ ಶೇ.50 ರಷ್ಟು ಉದ್ಯೋಗಗಳು ಖಾಲಿಯಿವೆ. ಅವುಗಳನ್ನು ಶೀಘ್ರವೇ ಭರ್ತಿ ಮಾಡಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ನ್ಯೂಸ್ಫಸ್ಟ್ ರಾಜ್ಯದ ಅತ್ಯಂತ ಜನಪ್ರಿಯ ಸುದ್ದಿವಾಹಿನಿಯಾಗಿದ್ದು, ಶಿಕ್ಷಣ ಕ್ಷೇತ್ರ, ಆರೋಗ್ಯ ಕ್ಷೇತ್ರ, ಸೈಬರ್ ಕ್ರೈಂ ಸೇರಿದಂತೆ ನಾಡಿನ ಜನರಿಗೆ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ವಚನಗಳ ಅಧ್ಯಯನ ಬಹಳ ವಿಸ್ತೃತವಾಗಿ ನಡೆಯುತ್ತಿದ್ದು, ವಚನಗಳ ಸಾರ, ಸತ್ವ, ವಿಶ್ಯಾದ್ಯಾಂತ ತಲುಪಿಸುವುದರ ಜೊತೆಗೆ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಜಾಗತಿಕ ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ 5ನೇ ಮಾಸಿಕ ಶರಣ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಜಾಗತಿಕ ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ 5ನೇ ಮಾಸಿಕ ಶರಣ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ನಗರದ ಸಿದ್ದಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ, ಬಸವ ಪ್ರಕಾಶನ ಹಾಗೂ ಸಿದ್ದಲಿಂಗೇಶ್ವರ ಪ್ರಕಾಶನದ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ನಗರದ ಸಿದ್ದಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ, ಬಸವ ಪ್ರಕಾಶನ ಹಾಗೂ ಸಿದ್ದಲಿಂಗೇಶ್ವರ ಪ್ರಕಾಶನದ…