ಮಹಾತ್ಮ ಗಾಂಧಿ, ಲಾಲಬಹದ್ದೂರ ಶಾಸ್ತ್ರಿ ಜಯಂತಿ ನಿಮಿತ್ತ ಸ್ವಚ್ಛತಾ ಕಾರ್ಯಕ್ರಮ

0
39

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ನೆಹರು ಯುವ ಕೇಂದ್ರ, ಕಲಬುರಗಿ, ಇಬ್ಬನಿ ಫೌಂಡೇಶನ್, ಕಲಬುರಗಿ ಯುತ್ ಅಡ್ವೆಂಚರ್ ಸ್ಪೋರ್ಟ್ಸ ಅಸೋಸಿಯೇಷನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಛತೆಯೇ ಸೇವೆ ೨೦೨೪ರ ಅಂಗವಾಗಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸುವ ಕುರಿತು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತೋತ್ಸವದ ಪ್ರಯುಕ್ತ ಮಹಾವಿದ್ಯಾಲಯದಲ್ಲಿ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿಗಳಾದ ಲಾಲಬಹದ್ದೂರ ಶಾಸ್ತಿçÃಜಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿಗಳಾದ ಲಾಲಬಹದ್ದೂರ ಶಾಸ್ತಿçÃಜಿ ಜೀವನ, ವ್ಯಕ್ತಿತ್ವ ಮತ್ತು ಅವರುಗಳು ಸಮಾಜಕ್ಕೆ ನೀಡಿರುವ ಕೊಡುಗೆಗಳ ಕುರಿತು ಮಾತನಾಡಿದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಸ್ವಯಂಸೇವಕ ಅಧಿಕಾರಿ ದೇವರಾಜ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಕಲಬುರಗಿ ನಗರದ ನೆಹರು ಯುವ ಕೇಂದ್ರದಲ್ಲಿರುವ ಸೌಲಭ್ಯಗಳು ಕುರಿತು ಮಾತನಾಡಿದರು.

ಪದವಿ ಮಹಾವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರು ಹಾಗೂ ಪದವಿ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀಮತಿ ಮಂಗಲಾ ಬಿರಾದಾರ ಅವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀಮತಿ. ಶೈಲಜಾ ನಾಕೇದಾರ ಅವರು ಪದವಿ ಮಹಾವಿದ್ಯಾಲಯದ ಸ್ವಯಂ ಸೇವಕಿಯರಿಗೆ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿನಿಯರಿಗೂ, ಬೋಧಕ, ಬೋಧಕೇತರ ಸಿಬ್ಬಂದಿಗಳಿಗೂ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸುವ ಕುರಿತು ಪ್ರತಿಜ್ಞಾವಿಧಿ ಬೋಧಿಸಿ ಎಲ್ಲರನ್ನು ವಂದಿಸಿದರು.

ಕಾರ್ಯಕ್ರಮದ ನಂತರ ಪದವಿ ಮಹಾವಿದ್ಯಾಲದ ರಾಷ್ಟಿçÃಯ ಸೇವಾ ಯೋಜನೆ ಘಟPಗಳ ಸ್ವಯಂ ಸೇವಕಿಯರು ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಶ್ರಮದಾನದಲ್ಲಿ ತೊಡಗಿ ಮಹಾವಿದ್ಯಾಲಯದ ಆವರಣವನ್ನು ಸ್ವಚ್ಛಗೊಳಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿಗಳು, ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು, ರಾಷ್ಟ್ರೀಯ ಸೇವಾ ಯೋಜನೆಘಟಕದ ಸ್ವಯಂ ಸೇವಕಿಯರು ಮತ್ತು ಮಹಾವಿದ್ಯಾಲಯಗಳ ಇತರ ವಿದ್ಯಾರ್ಥಿನಿಯರು ಭಾಗವಹಿಸಿದ್ದರು ಎಂದು ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮೋಹನರಾಜ ಎನ್ ಪತ್ತಾರ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here