ಮಹಾತ್ಮ ಗಾಂಧಿ, ಲಾಲಬಹದ್ದೂರ ಶಾಸ್ತ್ರಿ ಜಯಂತಿ ನಿಮಿತ್ತ ಸ್ವಚ್ಛತಾ ಕಾರ್ಯಕ್ರಮ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ನೆಹರು ಯುವ ಕೇಂದ್ರ, ಕಲಬುರಗಿ, ಇಬ್ಬನಿ ಫೌಂಡೇಶನ್, ಕಲಬುರಗಿ ಯುತ್ ಅಡ್ವೆಂಚರ್ ಸ್ಪೋರ್ಟ್ಸ ಅಸೋಸಿಯೇಷನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಛತೆಯೇ ಸೇವೆ ೨೦೨೪ರ ಅಂಗವಾಗಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸುವ ಕುರಿತು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತೋತ್ಸವದ ಪ್ರಯುಕ್ತ ಮಹಾವಿದ್ಯಾಲಯದಲ್ಲಿ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿಗಳಾದ ಲಾಲಬಹದ್ದೂರ ಶಾಸ್ತಿçÃಜಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿಗಳಾದ ಲಾಲಬಹದ್ದೂರ ಶಾಸ್ತಿçÃಜಿ ಜೀವನ, ವ್ಯಕ್ತಿತ್ವ ಮತ್ತು ಅವರುಗಳು ಸಮಾಜಕ್ಕೆ ನೀಡಿರುವ ಕೊಡುಗೆಗಳ ಕುರಿತು ಮಾತನಾಡಿದರು.

ಇದೇ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಸ್ವಯಂಸೇವಕ ಅಧಿಕಾರಿ ದೇವರಾಜ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಕಲಬುರಗಿ ನಗರದ ನೆಹರು ಯುವ ಕೇಂದ್ರದಲ್ಲಿರುವ ಸೌಲಭ್ಯಗಳು ಕುರಿತು ಮಾತನಾಡಿದರು.

ಪದವಿ ಮಹಾವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರು ಹಾಗೂ ಪದವಿ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀಮತಿ ಮಂಗಲಾ ಬಿರಾದಾರ ಅವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀಮತಿ. ಶೈಲಜಾ ನಾಕೇದಾರ ಅವರು ಪದವಿ ಮಹಾವಿದ್ಯಾಲಯದ ಸ್ವಯಂ ಸೇವಕಿಯರಿಗೆ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿನಿಯರಿಗೂ, ಬೋಧಕ, ಬೋಧಕೇತರ ಸಿಬ್ಬಂದಿಗಳಿಗೂ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸುವ ಕುರಿತು ಪ್ರತಿಜ್ಞಾವಿಧಿ ಬೋಧಿಸಿ ಎಲ್ಲರನ್ನು ವಂದಿಸಿದರು.

ಕಾರ್ಯಕ್ರಮದ ನಂತರ ಪದವಿ ಮಹಾವಿದ್ಯಾಲದ ರಾಷ್ಟಿçÃಯ ಸೇವಾ ಯೋಜನೆ ಘಟPಗಳ ಸ್ವಯಂ ಸೇವಕಿಯರು ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಶ್ರಮದಾನದಲ್ಲಿ ತೊಡಗಿ ಮಹಾವಿದ್ಯಾಲಯದ ಆವರಣವನ್ನು ಸ್ವಚ್ಛಗೊಳಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿಗಳು, ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು, ರಾಷ್ಟ್ರೀಯ ಸೇವಾ ಯೋಜನೆಘಟಕದ ಸ್ವಯಂ ಸೇವಕಿಯರು ಮತ್ತು ಮಹಾವಿದ್ಯಾಲಯಗಳ ಇತರ ವಿದ್ಯಾರ್ಥಿನಿಯರು ಭಾಗವಹಿಸಿದ್ದರು ಎಂದು ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮೋಹನರಾಜ ಎನ್ ಪತ್ತಾರ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

emedialine

Recent Posts

ಪತ್ರಕರ್ತರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು

ಇ-ಮೀಡಿಯಾ ಲೈನ್ ಕಲಬುರಗಿ: ಪತ್ರಕರ್ತರು ಸಾರ್ವಜನಿಕರ ಸಮಸ್ಯೆಗಳ ಪರಿಹಾರದ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು…

12 hours ago

ಕೋಚಿಂಗ್ ಗುರು* ಫೆಬ್ರವರಿ 1 ಮತ್ತು 2 ರಂದು ನ್ಯೂಸ್​​ಫಸ್ಟ್​​ನಿಂದ ಮೆಗಾ ಕೋಚಿಂಗ್ ಎಕ್ಸ್​​​ಪೋ

ಬೆಂಗಳೂರು:  ನ್ಯೂಸ್​​ಫಸ್ಟ್ ರಾಜ್ಯದ ಅತ್ಯಂತ ಜನಪ್ರಿಯ ಸುದ್ದಿವಾಹಿನಿಯಾಗಿದ್ದು, ಶಿಕ್ಷಣ ಕ್ಷೇತ್ರ, ಆರೋಗ್ಯ ಕ್ಷೇತ್ರ, ಸೈಬರ್ ಕ್ರೈಂ ಸೇರಿದಂತೆ ನಾಡಿನ ಜನರಿಗೆ…

4 days ago

ಶರಣರು-ದಾರ್ಶನಿಕರ ತೌಲನಿಕ ಅಧ್ಯಯನ ಅಗತ್ಯ: ಡಾ. ಮೀನಾಕ್ಷಿ ಬಾಳಿ

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ವಚನಗಳ ಅಧ್ಯಯನ ಬಹಳ ವಿಸ್ತೃತವಾಗಿ ನಡೆಯುತ್ತಿದ್ದು, ವಚನಗಳ ಸಾರ, ಸತ್ವ, ವಿಶ್ಯಾದ್ಯಾಂತ ತಲುಪಿಸುವುದರ ಜೊತೆಗೆ…

6 days ago

5ನೇ ಮಾಸಿಕ ಶರಣ ಸಂಗಮ ನಾಳೆ

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಜಾಗತಿಕ ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ 5ನೇ ಮಾಸಿಕ ಶರಣ…

1 week ago

5ನೇ ಮಾಸಿಕ ಶರಣ ಸಂಗಮ ನಾಳೆ

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಜಾಗತಿಕ ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ 5ನೇ ಮಾಸಿಕ ಶರಣ…

1 week ago

ಸಿದ್ದಲಿಂಗೇಶ್ವರ ಬುಕ್ ಡಿಪೋ 48ನೇ ವಾರ್ಷಿಕೋತ್ಸವ: ಜ.26ರಂದು 131 ಕೃತಿಗಳು ಲೋಕಾರ್ಪಣೆ

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ನಗರದ ಸಿದ್ದಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ, ಬಸವ ಪ್ರಕಾಶನ ಹಾಗೂ ಸಿದ್ದಲಿಂಗೇಶ್ವರ ಪ್ರಕಾಶನದ…

1 week ago