ಕಲಬುರಗಿ: ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘವು ಪಿಡಿಒ ಎಲ್ಲಾ ಹುದ್ದೆಗಳನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸುವಂತೆ ಆಗ್ರಹಿಸಿ ದಿನಾಂಕ 04.10.2024ರಿಂದ ಅನಿರ್ದಿಷ್ಟವಧಿಗೆ ಫ್ರೀಡಂ ಪಾರ್ಕ್ ಬೆಂಗಳೂರುನಲ್ಲಿ ಹೋರಾಟ ನಡೆಸುವುದು ಎಂದು ರಾಜ್ಯ ನಿರ್ದೇಸಕರು (ಮಹಿಳಾ ವಿಭಾಗ) ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಬಿ ಗ್ರೇಡ್ ಹುದ್ದೆ ಉನ್ನತೀಕರಣ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕು.ರಾಜೇಶ್ವರಿ ಸಾಹು ವಾಡಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಬಿ ಗ್ರೇಡ್ ಹುದ್ದೆ ಉನ್ನತೀಕರಣ ಸಂಘವು ರಾಜ್ಯದ ಪಿಡಿಒ ಅವರ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ, ಇದಕ್ಕೆ ಪ್ರಮುಖ ಕಾರಣ ರಾಜ್ಯದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯ ಜವಾಬ್ದಾರಿ ಮತ್ತು ಕೆಲಸದ ಹೊರೆಗೆ ಅನುಗುಣವಾಗಿ ಹುದ್ದೆ ಬಿ ದರ್ಜೆಗೆ ಉನ್ನತೀಕರಣಗೊಂಡಿರುವುದಿಲ್ಲ ಹಾಗೂ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸುವ ಮೂಲಕ, ನಮ್ಮ ಸೇವೆಯನ್ನು ಗೌರವಿಸುವಂತೆ ಆಗ್ರಹಿಸಿದ್ದಾರೆ.
ಈ ಹೋರಾಟದ ಪರಿಣಾಮ ಗ್ರಾಮ ಪಂಚಾಯಿತಿಗಳಲ್ಲಿನ ಅನೇಕ ಮೂಲಭೂತ ಸೌಕರ್ಯಗಳ ಕೆಲಸಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಜೊತೆಗೆ ರಾಜ್ಯದ ಸುಮಾರು 4500ಕ್ಕೂ ಹೆಚ್ಚಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ಹೋರಾಟದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಒಟ್ಟಾರೆಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ಸೇವೆಯನ್ನು ಗೌರವಿಸುವಂತೆ ಮತ್ತು ತಮ್ಮ ಹುದ್ದೆಯನ್ನು ಉನ್ನತೀಕರಿಸುವಂತೆ ಅವರು ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…