ಕಲಬುರಗಿ; ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ, ನಗರದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಾಗೂ ಈಗಾಗಲೇ ಪಾಲಿಕೆಯಿಂದ ಇತರೆ ಸ್ವಚ್ಛತಾ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ “ಸ್ವಚ್ಛತಾ ಹೀ ಸೇವಾ” ಅಂಗವಾಗಿ 2ನೇ ಅಕ್ಟೋಬರ್-2024 ರಂದು ಕಾರ್ಯಕ್ರಮ ಇಂದು ಬೆಳಿಗ್ಗೆ 9 ಗಂಟೆಗೆ ಪಾಲಿಕೆ ಕಚೇರಿ ಮುಂದೆ ಜರುಗಿತು.
ಪಾಲಿಕೆ ಪೂಜ್ಯ ಮಹಾಪೌರರಾದ ಯಲ್ಲಪ್ಪ ನಾಯ್ಕೋಡಿ ಹಾಗೂ ಸಾರ್ವಜನಿಕ ಆರ್ಯೋಗ್ಯ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಅವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಸ್ವಚ್ಚತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನಂತರ ಗಣ್ಯರು ಪಾಲಿಕೆ ಕಚೇರಿ ಪಕ್ಕದ ಆವರಣವನ್ನು ಸ್ವತಃ ತಮ್ಮ ಕೈಯಲ್ಲಿ ಪೆÇರಕೆ ಹಿಡಿದು ಗುಡಿಸುವ್ ಮೂಲಕ ಸ್ವಚ್ಛಗೊಳಿಸಿದರು. ವಿವಿಧ ಶಾಲೆಗಳಿಂದ ಆಗಮಿಸಿದ್ದ ಎನ್‍ಸಿಸಿ ವಿದ್ಯಾರ್ಥಿಗಳು ಕೂಡ ಅಪ್ಪ ಕೆರೆ ಪಕ್ಕದ ಉದ್ಯಾನವನವನ್ನು ಸ್ವಚ್ಛಗೊಳಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಪಾಟೀಲ್ ಭುವನಿಷ್ ದೇವಿದಾಸ, ಉಪ ಆಯುಕ್ತರಾದ ಆರ್ ಪಿ ಜಾಧವ್, ಮಹಾನಗರ ಪಾಲಿಕೆ ಲೆಕ್ಕ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನಾ ಪರವೀನ್, ಪಾಲಿಕೆ ಸದಸ್ಯರಾದ ಲತಾ ರವಿ ರಾಠೋಡ್, ನಿಂಗಮ್ಮ ಕಟ್ಟಿಮನಿ, ರೇಣುಕಾ ಸೇರಿದಂತೆ ಸುಷ್ಮಾ ಸಾಗರ್, ಬಾಬುರಾವ್, ಸುಭಾಷ್, ವೈಶಾಲಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಮಾಜ ಸೇವಕರು ಭಾಗವಹಿಸಿದ್ದರು. ಆರ್ ಜೇ ಮಂಜು ಹಿರೋಳಿ ಕಾರ್ಯಕ್ರಮ ನಿರೂಪಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…