ಕಲಬುರಗಿ: ರಾಷ್ಟ್ರೀಯ ವೈದ್ಯಕೀಯ ಆಯೋಗ ಪದವಿ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ‘ಕುಟುಂಬ ದತ್ತು ಕಾರ್ಯಕ್ರಮ’ದ ಕುರಿತು ತಮ್ಮ ಅನುಭವಗಳನ್ನು ಪ್ರಬಂಧದ ರೂಪದಲ್ಲಿ ಸಲ್ಲಿಸುವ ರಾಷ್ಟ್ರೀಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಖಾಜಾ ಬಂದನವಾಜ ವಿಶ್ವ ವಿದ್ಯಾಲಯದ ಕಮ್ಯುನಿಟಿ ಮೆಡಿಸಿನ ವಿಭಾಗದ ವಿದ್ಯಾರ್ಥಿನಿ ಸಯಿದಾ ಲೀನಾ ಪ್ರಬಂಧ ಎನ್ ಎಂ ಸಿ ಯ – ಇ ಪುಸ್ತಕದಲ್ಲಿ ಪ್ರಕಟಿಸಲಾಗಿದೆ.
ರಾಷ್ಟ್ರದಾದ್ಯಂತ 8000 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅವರ ಪೈಕಿ 84 ಪ್ರಬಂಧಗಳ ಪ್ರಕಟಣೆಯಾಗಿವೆ. ಕೆಬಿಎನ್ ವಿಶ್ವ ವಿದ್ಯಾಲಯದ ಸಮ ಕುಲಾಧಿಪತಿ ಜನಾಬ ಸಯ್ಯದ ಮುಹಮ್ಮದ ಅಲಿ ಅಲ ಹುಸ್ಸೇನಿ ಲೀನಾಳಿಗೆ ವಿಭಾಗದ ವತಿಯಿಂದ ಏರ್ಪಡಿಸಿದ ಸಮಾರಂಭದಲ್ಲಿ ಸನ್ಮಾನಿಸಿದರು. ಅಲ್ಲದೇ ಎಲ್ಲ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಮಾತುಗಳನ್ನಾಡಿ ಅವರನ್ನು ಹುರಿದುಂಬಿಸಿದರು. ವಿದ್ಯಾರ್ಥಿಗಳಿಗೆ ನಮ್ಮ ಕೆಬಿಎನ್ ಸದಾ ಪ್ರೋತ್ಸಾಹಿಸುತ್ತದೆ ಅಂದರು. ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಕ್ಕಾಗಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ವಿವಿಯ ಉಪ ಕುಲಪತಿ ಪ್ರೊ ಅಲಿ ರಜಾ ಮೂಸ್ವಿ ಇವರು ಮಾತನಾಡುತ್ತ, ಕೆಬಿಎನ ಕೇವಲ ಅಧ್ಯಯನಕ್ಕಷ್ಟೇ ಅಲ್ಲದೆ ಕ್ರೀಡೆ, ಕಲೆ ಮತ್ತು ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತದೆ. ಇದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಯಾಗುತ್ತದೆ ಎಂದರು.
ಸಯಿದಾ ಲೀನಾ ವಿವಿಗೆ ಮತ್ತು ಉಪನ್ಯಾಸಕರಿಗೆ ಧನ್ಯವಾದಗಳನ್ನು ಹೇಳುತ್ತ ತಮ್ಮ ಅನುಭವವವನ್ನು ಹಂಚಿಕೊಂಡಳು. ವಿವಿಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥೆ ಡಾ.ಶಹನಾಜ್ ಶಾಹೀನ್ ಸ್ವಾಗತಿಸಿದರು. ಸಹಾಯಕ ಪ್ರದ್ಯಾಪಾಕ ಡಾ. ಎಂ. ಎ. ಫಾಹಿಮ್ ವಂದಿಸಿದರೆ, ಡಾ ಇರಫಾನ್ ಅಲಿ ನಿರೂಪಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…