ಸುರಪುರ:ಇಲ್ಲಿಯ ಹಸನಾಪುರ ವಲಯದ ರಂಗಂಪೇಟ್ ಜಿವ್ಹೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರ್ರೀ ಕ್ಷೇತ್ರ ಧÀರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಯಾದಗಿರಿ ಸಂಯುಕ್ತಾಶ್ರಯದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.
ಪರಮ ಪೂಜ್ಯ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ದಿವ್ಯ ಸಾನಿಧ್ಯವನ್ನು ವಹಿಸಿ ಉದ್ಘಾಟಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದೀ ಯೋಜನೆಯ ಸಂಸ್ಥೆಯ ವತಿಯಿಂದ ಈ ದಿನ ಗಾಂಧಿ ಜಯಂತಿಯ ಪ್ರಯುಕ್ತ ಸಂಭ್ರಮ ಆಚರಣೆ ವಿಜೃಂಭಣೆಯಿಂದ ಮಾಡಿರುತ್ತಾರೆ.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಲಕ್ಷ್ಮೀಪುರ ಶ್ರೀಗಿರಿ ಮಠದ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮಹಾತ್ಮ ಗಾಂಧಿಯವರ ಆಶಯದಂತೆ ಸುಂದರವಾದ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಲಿಯುಗದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ || ಡಿ.ವಿರೇಂದ್ರ ಹೆಗ್ಗಡೆ ಸ್ವಾಸ್ತ್ಯ ಸಮಾಜದಲ್ಲಿ ದುಶ್ಚಟ ಮುಕ್ತ ರಾಮರಾಜವನ್ನು ನಿರ್ಮಿಸುವ ಸಂಕಲ್ಪ ಮಾಡಿರುವುದು ನಮಗೆಲ್ಲಾ ತಿಳಿಸಿರುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದೀ ಯೋಜನೆ ಈ ಭಾಗದ ಮಹಿಳೆಯರಲ್ಲಿ ಶಿಸ್ತು ಮತ್ತು ವ್ಯವಹಾರ ಜ್ಞಾನವನ್ನು ಅತ್ಯಂತ ಅಚ್ಚುಕಟ್ಟಾಗಿ ಜನಸಾಮಾನ್ಯರಿಗೆ ಉಪಯೋಗ ಆಗುವ ಕಾರ್ಯಗಳನ್ನು ಹಮ್ಮಿಕೊಳ್ಳುತ್ತೀದೆ. ಎಂದು ಧರ್ಮಸ್ಥಳ ಗ್ರಾಮಾಭಿವೃದ್ದೀ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಮೆಚ್ಚುವೆ ವ್ಯಕ್ತಪಡಿಸಿ ಶುಭ ಹಾರೈಸಿದರು.
ಉದ್ಘಾಟಕರಾಗಿ ಆಗಮಿಸಿದ್ದ ಪಿಎಸ್‍ಐ ಶಿವರಾಜ್ ಪಾಟೀಲ್ ಮಾತನಾಡಿ, ಮಹಾತ್ಮ ಗಾಂಧಿಜಿ ಅವರು ಮಾಡಿದ ತ್ಯಾಗ, ಬಲಿದಾನದ ಬಗ್ಗೆ ನಾವೆಲ್ಲ ಅರಿತುಕೊಳ್ಳಬೇಕು ಅಂದಿನ ಕಾಲದಲ್ಲಿ ಅವರು ಮಾಡಿದ ಹೋರಾಟಗಳು ನಾವು ಈಗ ಸ್ವಂತಂತ್ರÀರಾಗಿ ಜೀವನ ಮಾಡಲು ಸಾಧ್ಯವಾಗಿದೆ. ಮುಂದಿನ ಪಿಳಿಗೆಗಳಿಗೆ ಮಹಾತ್ಮ ಗಾಂಧಿಜಿಯವರ ಮತ್ತು ಲಾಲ್‍ಬಹದೂರ್ ಶಾಸ್ರ್ತೀಯವರ ಹಾಗೂ ದೇಶದ ಸ್ವತಂತ್ರ್ಯಕ್ಕಾಗಿ ಹೋರಾಡಿದ ಎಲ್ಲಾ ಮಹಿನಿಯರು ಆದರ್ಶವಾಗಬೇಕು ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕಮಲಾಕ್ಷ ಜಿಲ್ಲಾ ನಿರ್ದೇಶಕರು ಮಾತನಾಡುತ್ತಾ ದುಶ್ಷಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೂಜ್ಯ ಹೆಗ್ಗಡೆಯವರು ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆಯನ್ನು ಪ್ರಾರಂಭಿಸಿ ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಮದ್ಯವರ್ಜನ ಶಿಬಿರ ಜನಜಾಗೃತಿ ಸಮಾವೇಶ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯ ದೃಷ್ಠಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಹೀಗೆ ವಿವಿಧ ರೀತಿಯ ಹಲವಾರು ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರನ್ನು ಈ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದಲಾಯಿಸುವ ಪ್ರೇರಣೆದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೀದ್ದಾರೆ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಕೋಶಾಧಿಕಾರಿ ಸೂಗುರೇಶ್ ವಾರದ್ ಮಾತನಾಡಿ, ಗಾಂಧಿ ಜಯಂತಿ ಕಾರ್ಯಕ್ರಮವು ಕೇವಲ ಸರ್ಕಾರಿ ಅಧಿಕಾರಿಗಳಿಗೆ ಸೀಮಿತ ಆಗದೇ ಹಳ್ಳಿ ಹಳ್ಳಿಗಳಲ್ಲೂ ಗ್ರಾಮಾಭಿವೃದ್ದಿ ಯೋಜನೆ ಮುಖೆನ ಗಾಂಧಿ ಜಯಂತಿ ಸಂಭ್ರಮಾಚರಣೆ ಮಾಡುತ್ತೀರುವುದು ಈ ಸಂಸ್ಥೆಯ ಮಹಾತ್ಕಾರ್ಯವಾಗಿದೆ ಎಂದರು.ಇದೇ ಸಂದರ್ಭದಲ್ಲಿ .ಪ್ರಕಾಶ್.ಎಸ್.ಅಂಗಡಿ,ವಕೀಲರಾದ ಜಯಲಲಿತಾ ವಿ ಪಾಟೀಲ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜನಜಾಗೃತಿ ವಿಭಾಗದ ಯೋಜನಾದಿಕಾರಿ ರಾಜೇಶ್.ಕೆ ಪ್ರಾಸ್ತಾವಿಕ ಮಾತನಾಡಿ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಿವಶರಣಪ್ಪ ಹೆಡಗಿನಾಳ ಉಪಸ್ಥಿತರಿದ್ದು, ಸ್ವ-ಸಹಾಯ ಸಂಘದ ಸದಸ್ಯರು ಕೇಂದ್ರ ಬಿಂದುಗಳಾಗಿ ವಲಯದ ಸೇವಾಪ್ರತಿನಿಧಿಗಳು ಮತ್ತು ಸಂಸ್ಥೆಯ ಕಾರ್ಯಕರ್ತರು ಹಾಜರಿದ್ದರು.ನಿಂಗರಾಜ್ ನಿರೂಪಿಸಿ . ತ್ರೀವೇಣಿ ಬಿರಾದಾರ್ ಸ್ವಾಗತಿಸಿ. ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಸಂತೋಷ್.ಎ.ಎಸ್ ರವರು ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…