ಸುರಪುರ: ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ಧೂರ್ ಶಾಸ್ತ್ರಿಯವರ ಜಯಂತಿ ಆಚರಣೆ ಅಂಗವಾಗಿ ನಗರದ ಶ್ರೀ ವೇಣುಗೊಪಾಲ ಸ್ವಾಮಿ ದೇವಸ್ಥಾನ ಆವರಣ ದಿಂದ ಮಹಾತ್ಮ ಗಾಂಧಿ ವೃತ್ತದ ವರೆಗೆ ಹಮ್ಮಿಕೊಂಡಿದ್ದ ಸ್ವಚ್ಛತೆಯ ಸೇವೆ-2024 ಅಭಿಯಾನಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಹಾತ್ಮ ಗಾಂಧಿ ವೃತ್ತದ ವರೆಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವ ಬ್ಯಾನರ್ ಹಾಗೂ ಭಿತ್ತಿ ಪತ್ರಗಳ ಹಿಡಿದು ಜಾಥಾ ನಡೆಸಲಾಯಿತು.ಈ ಸಂದರ್ಭದಲ್ಲಿ ತಾಲ್ಲೂಕ ಪಂಚಾಯತಿ ಇಓ ಬಸವರಾಜ ಸಜ್ಜನ್ ಮಾತನಾಡಿ,ಸ್ವಚ್ಛತೆ ಎನ್ನುವುದು ಒಂದು ದೇಶದ ಸೌಂದರ್ಯಕ್ಕೆ ತುಂಬಾ ಮುಖ್ಯವಾಗಿದೆ.ಉತ್ತಮ ಪರಿಸರ ದಿಂದ ಸಮಾಜದ ಅಭಿವೃಧ್ಧಿಯೂ ಸಾಧ್ಯವಿದೆ.ಆದ್ದರಿಂದಲೇ ಇಂದು ಸರಕಾರ ಸ್ವಚ್ಛತಾ ಹೀ ಸೇವಾ ಎನ್ನುವ ಅಭಿಯಾನವನ್ನು ಆರಂಭಿಸಿದ್ದು,ಇಂದು ನಗರಾಭಿವೃಧ್ಧಿ ಇಲಾಖೆ,ತಾಲ್ಲೂಕ ಆಡಳಿತ,ತಾಲ್ಲೂಕ ಪಂಚಾಯತಿ,ನಗರಸಭೆ ವತಿಯಿಂದ ಈ ಅಭಿಯನಾವನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.
ನಂತರ ಮಹಾತ್ಮ ಗಾಂಧಿ ವೃತ್ತದಲ್ಲಿ ಎಲ್ಲರು ಪೊರಕೆ ಹಿಡಿದು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಲಾಯಿತು.ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಹೀನಾ ಕೌಸರ್,ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ (ತಾತಾ),ತಹಸಿಲ್ದಾರ್ ಹುಸೇನಸಾಬ್ ಎ.ಸರಕಾವಸ್,ಮುಖಂಡರಾದ ರಾಜಾ ಲಕ್ಷ್ಮೀನಾರಾಯಣ ನಾಯಕ,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೇದಾರ,ರಮೇಶ ದೊರೆ ಆಲ್ದಾಳ,ನಿಂಗರಾಜ ಬಾಚಿಮಟ್ಟಿ,ವೆಂಕಟೇಶ ಹೊಸ್ಮನಿ,ಸುವರ್ಣ ಎಲಿಗಾರ,ಲಕ್ಷ್ಮೀ ಎಮ್.ಬಿಲ್ಲವ್, ಬಿಸಿಎಮ್ ತಾಲೂಕ ಅಧಿಕಾರಿ ತಿಪ್ಪಾರಡ್ಡಿ ಮಾಲಿಪಾಟೀಲ್,ಸಮಾಜ ಕಲ್ಯಾಣಾಧಿಕಾರಿ ಮಹ್ಮದ್ ಸಲೀಂ,ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ವ್ಯವಸ್ಥಾಪಕ ಯಲ್ಲಪ್ಪ ನಾಯಕ,ಬಿಇಓ ಯಲ್ಲಪ್ಪ ಕಾಡ್ಲೂರ,ಸಿಡಿಪಿಓ ಅನಿಲ್ ಕುಮಾರ ಕಾಂಬ್ಳೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು,ನಗರಸಭೆಯ ಎಲ್ಲಾ ಸಿಬ್ಬಂದಿಗಳು ಹಾಗೂ ಪೌರ ಕಾರ್ಮಿಕರು ಭಾಗವಹಿಸಿದ್ದರು.