ಶಹಾಬಾದ:ಅಹಿಂಸಾತ್ಮಕ ಹೋರಾಟದ ಮೂಲಕವು ಗೆಲ್ಲಬಹುದು ಎನ್ನುವುದನ್ನು ಜಗತ್ತಿಗೆ ತೋರಿಸಿಕೊಟ್ಟ ಮಹಾಚೇತನ ಮಹಾತ್ಮ ಗಾಂಧೀಜಿ ಎಂದು ಮಾಡಬೂಳ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಭಾವತಿ ಪಾಟೀಲ ಹೇಳಿದರು.
ಅವರು ಬುಧವಾರ ಕಲಬುರಗಿ ತಾಲೂಕಿನ ಮಾಡಬೂಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಗಾಂಧೀ ಜಯಂತಿ ಹಾಗೂ ಲಾಲಾಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬ್ರಿಟೀಷರ ದಾಸ್ಯದಿಂದ ಮುಕ್ತಗೊಂಡು ಅಹಿಂಸಾ ಚಳುವಳಿಯ ಮೂಲಕ ಮಹಾತ್ಮಾ ಗಾಂಧೀಜಿ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟರು ಎಂದು ಗುಣಗಾನ ಮಾಡುತ್ತೆವೆ. ಏಕೆಂದರೆ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದರೂ ಎನ್ನುವುದಕ್ಕಿಂತ ಹಿಂಸೆ ಇಲ್ಲದೇ ಶಾಂತಿಯ ಹೋರಾಟದಿಂದ ಎಂಬ ಕಾರಣಕ್ಕೆ ಎಂಬುದನ್ನು ತಿಳಿದುಕೊಳ್ಳಬೇಕು.ಅವರ ಸರಳ ಮತ್ತು ಆದರ್ಶ ಜೀವನ ನಾವೆಲ್ಲರೂ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.
ಮುಖ್ಯ ಅತಿಥಿಗಳಾಗಿ ನಿವೃತ ಉಪನ್ಯಾಸಕ ಅಲ್ಲಾ ಪಟೇಲ್ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ, ಶಾಂತಿ ಅಹಿಂಸೆ, ತ್ಯಾಗ, ಸತ್ಯಾಗ್ರಹಗಳೆಂದ ರಕ್ತರಹಿತ ಕ್ರಾಂತಿಯಿಂದ ನಮಗೆ ಸ್ವಾತಂತ್ರವನ್ನು ತಂದು ಕೊಟ್ಟಿದ್ದಾರೆ. ಮಹತ್ಮಾ ಗಾಂಧಿ, ಲಾಲ ಬಹದ್ದೂರ ಶಾಸ್ತ್ರಿಯವರ ತತ್ವ ಆದರ್ಶಗಳು ಅಂದಿಗಿಂತಲೂ ಇಂದು ಬಹಳ ಮುಖ್ಯವಾಗಿವೆ.ದೇಶದ ಜನರ ನೋವಿಗೆ ಸ್ಪಂದಿಸಿ ಅದರ ಪರಿಹಾರಕ್ಕೆ ಪ್ರಯತ್ನಿಸಿದ ಮಹಾತ್ಮನ ಚಿಂತನೆ, ಮೌಲ್ಯ ಹಾಗೂ ನೆನಪನ್ನು ಸಮಾಜದಲ್ಲಿ ಉಳಿಸುವಂಥ ಕಾರ್ಯಕ್ಕೆ ಮುಂದಾಗಬೇಕಿದೆ ಎಂದು ಹೇಳಿದರು. ಉಪನ್ಯಾಸಕರಾದ ಗಣಪತಿ ಪೂಜಾರಿ, ಸುರೇಖಾ, ವμರ್Á, ಗುರುನಾಥ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಉಪನ್ಯಾಸಕಿ ಸುಮಂಗಲಾ ಸಂಗಾವಿ ನಿರೂಪಿಸಿದರು, ಉಪನ್ಯಾಸಕಿ ಮಂಗಳಾ ವಂದಿಸಿದರು.
ನಂತರ ಕಾಲೇಜಿನ ವಿಧ್ಯಾರ್ಥಿಗಳು ಹಾಗೂ ಉಪನ್ಯಾಸಕರು ಕಾಲೇಜಿನ ಆವರಣ ಹಾಗೂ ಮೈದಾನ ಸ್ವಚ್ಚತೆ ಮಾಡಿ ಶ್ರಮದಾನ ಕೈಗೊಂಡರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…