ಪ್ರಬಲ ವಿರೋಧ ಪಕ್ಷ ಇದ್ದಾಗ ಪ್ರಜಾಪ್ರಭುತ್ವಕ್ಕೆ ಬೆಲೆ: ಮದಗುಣಕಿ

ಕಲಬುರಗಿ: ಬಾಬಾ ಸಾಹೇಬರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಆಳವಾಗಿ ಚಿಂತಿಸಿದ್ದಾರೆ. ಪ್ರಜಾಪ್ರಭುತ್ವದ ಬಗ್ಗೆ ಚರ್ಚೆ ಮಾಡುವಾಗಲೆಲ್ಲಾ ಜಾಗತಿಕ ರಾಜಕೀಯ ವಿದ್ಯಮಾನಗಳನ್ನು ಗುರುತಿಸುತ್ತಾರೆ. ಅಂದರೆ ಅಂಬೇಡ್ಕರ್ ಅವರ ಪ್ರಜಾಪ್ರಭುತ್ವದ ಚಿಂತನೆ ಜಾಗತಿಕ ದಮನಕ್ಕೊಳಗಾದ ಜನಸಮುದಾಯಗಳ ಸಮತೆಯ ಕನಸಾಗಿದೆ ಎಂದು ಉಪನ್ಯಾಸಕ ಪಂಡಿತ್ ಮದಗುಣಕಿ ಅಭಿಪ್ರಾಯ ಪಟ್ಟರು.

ನಗರದ ಕಲಾ ಮಂಡಳದಲ್ಲಿ ಕಲ್ಯಾಣ ಕರ್ನಾಟಕ ಸಮರ ಸೇನೆ ಹಮ್ಮಿ ಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಪ್ರಜಾ ಪ್ರಭುತ್ವ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಅವರು, ಪ್ರಜಾಪ್ರಭುತ್ವದ ಅರಿವನ್ನು ಜಾಗತಿಕ ಅರಿವಿನ ನೆಲೆಯಲ್ಲಿ ವಿಸ್ತರಿಸಬೇಕಿದೆ. ಮುಂದೆ ಅಂಬೇಡ್ಕರ್ ಅವರ ಪ್ರಜಾಪ್ರಭುತ್ವದ ವ್ಯಾಖ್ಯಾನವನ್ನು ವರ್ಷದ ಥೀಮ್ ಆಗಿಸಲು ಜಾಗತಿಕವಾಗಿ ಭಾರತ ಸರ್ಕಾರ ಒತ್ತಾಯಿಸಬೇಕಾಗಿದೆ ಎಂದರು.

ಸಮಾಜದಲ್ಲಿ ಕಣ್ಣಿಗೆ ರಾಚುವ ಅಸಮಾನತೆ ಇರಬಾರದು. ಅಸಮಾನತೆ ಹೆಚ್ಚಾದರೆ ಇದರ ಹೊಟ್ಟೆಯೊಳಗೆ ಹಿಂಸೆಯ ಬೀಜಗಳು ಮೊಳೆಯುತ್ತವೆ. ಆಡಳಿತ ಪಕ್ಷವನ್ನು ಕಠಿಣ ಪರೀಕ್ಷೆಗೆ ಒಳಪಡಿಸುವ ಒಂದು ಪ್ರಬಲ ವಿರೋಧ ಪಕ್ಷ ಇದ್ದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತದೆ. ಆಡಳಿತ ಮತ್ತು ಕಾನೂನಿನ ಮುಂದೆ ಎಲ್ಲರೂ ಸಮಾನವಾಗಿರಬೇಕು.

ಸಂವಿಧಾನದ ಮೌಲ್ಯಗಳನ್ನು ಮೀರಿದಾಗ, ಒಂದು ಗಂಭೀರ ತಪ್ಪು ಮಾಡಿದಾಗ ಆಗುವ ವೇದನೆಯಾಗಿ ಮನುಷ್ಯ ಪರಿವರ್ತನೆ ಆಗಬೇಕು. ಈ ಬಗೆಯ ಸಂವಿಧಾನಿಕ ನೈತಿಕತೆ ಜನರಲ್ಲಿ ನೆಲೆಗೊಂಡಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಬಾಬಾ ಸಾಹೇಬರು ಪೂನಾದ ಭಾಷಣದಲ್ಲಿ ಹೇಳಿದ್ದಾರೆ ಎಂದು ಉಲ್ಲೇಖಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ್ ಕಾರ್ಯಕ್ರಮ ಉದ್ಘಾಟಿಸಿದರು. ನೇತೃತ್ವ ವಹಿಸಿದ್ದ ಸೇನೆಯ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ ನಾಲವಾರಕರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ವಿವಿಧ ಕ್ಷೇತ್ರದ ಸಾಧಕರಾದ ಡಾ. ಗಂಗಾಧರ ಬಡಿಗೇರ, ಶಾದಾಬ್ ಮಲ್ಲೀಕ್, ಮಲ್ಲಿಕಾರ್ಜುನ ದೊಡ್ಡಮನಿ, ಜಿ. ಸತೀಶ, ಡಾ. ಅನೀಲ್ ಟೇಂಗಳಿ, ಧೂಳಪ್ಪ ದ್ಯಾಮನಕರ್ ಅವರನ್ನು ಸತ್ಕರಿಸಲಾಯಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

3 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

12 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

12 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

13 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago