ಜೇವರ್ಗಿ: ನೆರೆಯ ಯಾದಗಿರಿ ಜಿಲ್ಲೆಯ ಶಹಾಪೂರ್ ತಾಲ್ಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಶಾಲೆಯೊಂದರ ಗೋಡೆಯ ಮೇಲೆ ಬಿಡಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಗೇಡಿಗಳು ಸೆಗಣಿ ಎರಚಿ ಅವಮಾನ ಮಾಡಿರುವ ಕಿಡಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ನೇತೃತ್ವದಲ್ಲಿನ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು.
ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ಶ್ರೀಹರಿ ಕರಕಿಹಳ್ಳಿ ಅವರ ನೇತೃತ್ವದಲ್ಲಿ ಪಟ್ಟಣದ ಅಖಂಡೇಶ್ವರ್ ವೃತ್ತದ ಮೂಲಕ, ಅಂಬೇಡ್ಕರ್ ವೃತ್ತ, ಬಸವೇಶ್ವರ್ ವೃತ್ತದಿಂದ ತಹಸೀಲ್ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ಶಿವಣ್ಣಗೌಡ ಹಂಗರಗಿ, ಜೈಭೀಮ್ ನರಿಬೋಳ್, ಮಲ್ಲಿಕಾರ್ಜುನ್ ದನ್ನಾಕರ್, ಶರಣಪ್ಪ ವಡಗೇರಾ, ಶ್ರೀಮಂತ್ ಧನಕರ್, ಮಲ್ಲಣ್ಣ ಕೊಡಚಿ, ಸಿದ್ದಪ್ಪ ಆಲೂರ್, ಶಂಕರ್ ಗೋಗಿ, ಸಾಯಬಣ್ಣ ಸಾಥಖೇಡ್, ರಮೇಶ್ ಕುರನಳ್ಳಿ, ಈರಪ್ಪ ಸಾಥಖೇಡ್, ಬಾಬು ಹಿಪ್ಪರಗಿ, ಭೂತಾಳಿ ಹೆಗಡೆ, ಶರಣಪ್ಪ ಲಖಣಾಪೂರ್, ರಾಜು ಕಾಸರಭೋಸ್ಗಾ ಮುಂತಾದವರು ಪಾಲ್ಗೊಂಡಿದ್ದರು.
ಪ್ರತಿಭಟನೆಕಾರರು ನಂತರ ತಹಸಿಲ್ದಾರ್‌ರ ಮೂಲಕ ರಾಜ್ಯದ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿ, ಇಂತಹ ಮಹಾನ್ ನಾಯಕರನ್ನು ಅವಮಾನ ಮಾಡುತ್ತಿರುವುದು ಕ್ಷೇದನಿಯ ವಿಷಯವಾಗಿದೆ, ಸರಕಾರ ಕೂಡಲೇ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳು ಮರುಕಳಿಸದಂತೆ ಭಾವಚಿತ್ರಕ್ಕೆ ಸೆಗಣಿ ಎರಚಿ ಅವಮಾನಗೊಳಿಸಿದ ಕಿಡಗೇಡಿಗಳನ್ನು ಕೂಡಲೇ ಬಂಧಿಸಿ, ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…