ಗಾಂಧೀಜಿ ಜೀವನ ಎಲ್ಲರಿಗೂ ಆದರ್ಶ: ಪ್ರೊ. ದಯಾನಂದ ಅಗಸರ

0
40

ಕಲಬುರಗಿ: ಮಹಾತ್ಮ ಗಾಂಧಿ ಅವರ ಜೀವನ ಮತ್ತು ತತ್ವಗಳು ಪ್ರತಿಯೊಬ್ಬ ವ್ಯಕ್ತಿಯ ಬದುಕಿಗೆ ಪ್ರೇರಣೆಯಾಗಿದೆ. ಅವರ ನಿಸ್ವಾರ್ಥ ಸೇವೆ ಮತ್ತು ಸ್ವಚ್ಛತಾ ಪರಿಕಲ್ಪನೆಗಳನ್ನು ದೇಶದ ಪ್ರಗತಿಗಾಗಿ ಒಗ್ಗಟಿನಿಂದ ಶ್ರಮಿಸಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು.

ಮಹಾತ್ಮ ಗಾಂಧಿ ಅವರ 155ನೇ ಜಯಂತ್ಯುತ್ಸವ ಅಂಗವಾಗಿ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಹಾತ್ಮಗಾಂಧಿ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಾತನಾಡಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜನ್ಮದಿನವಾಗಿರುವ ಇಂದು ಅವರ ದೇಶ ಸೇವೆಯನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು. ಗಾಂಧಿಯವರು ಹೋರಾಟ ಮತ್ತು ಚಿಂತನೆಗಳು ಭಾರತೀಯರನ್ನು ಒಗ್ಗೂಡಿಸಿ ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ಸಾಧ್ಯವಾಯಿತು ಎಂದರು.

Contact Your\'s Advertisement; 9902492681

ಮಹಾತ್ಮ ಗಾಂಧಿ ಅವರ ತತ್ವ ಮತ್ತು ಸಂದೇಶಗಳಂತೆ ಪ್ರತಿಯೊಬ್ಬರು ದೇಶ ಸೇವೆಗೆ ಒಗ್ಗೂಡಿ ಕೆಲಸ ಮಾಡಬೇಕು. ವೈಯಕ್ತಿಕ ಅಥವಾ ಆಂತರಿಕ ಕೆಲಸಗಳಲ್ಲಿಯೂ ಸಹ ಮಾನಸಿಕ ಸಿದ್ಧತೆ ಮತ್ತು ಸಾಮಾಜಿಕ ಪ್ರಜ್ಞೆ ಅವಶ್ಯಕ. ತಮ್ಮ ಸುತ್ತಮುತ್ತಲಿನ ಸ್ವಚ್ಛತೆಗೆ ಆದ್ಯತೆ ನೀಡಿ ಉತ್ತಮ ಪರಿಸರ ನಿರ್ಮಾಣ ಮಾಡಬೇಕು ಎಂದ ಅವರು ಆಹಾರಕ್ಕಾಗಿ ಬೇಡಿಕೆಯಿದ್ದ ಸಂದರ್ಭದಲ್ಲಿ ದೇಶದ ಎರಡನೇ ಪ್ರಧಾನ ಮಂತ್ರಿಯಾಗಿದ್ದ ಲಾಲ್ ಬಹುದ್ದೂರ್ ಶಾಸ್ತ್ರೀ ಅವರು ಕ್ಷೀರ ಕ್ರಾಂತಿ ಮತ್ತು ಹಸಿರು ಕ್ರಾಂತಿ ಮೂಲಕ ದೇಶದಲ್ಲಿ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಿದ್ದರು. ಅಮುಲ್ ಉತ್ಪನ್ನ ಹೆಚ್ಚು ಜನಪ್ರಿಯಗೊಳ್ಳಲು ಅವರು ಆಲೋಚನೆಯ ಕ್ಷೀರಕ್ರಾಂತಿ ಹೈನೋದ್ಯಮ ಬೆಳವಣಿಗೆಗೆ ನಾಂದಿಯಾಯಿತು ಎಂದರು.

ಕುಲಸಚಿವ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮದಿನವನ್ನು ಇಂದು ದೇಶದಾಧ್ಯಂತ ಆಚರಿಸಲಾಗುತ್ತಿದೆ. ಗಾಂಧಿ ಅವರ ನೀತಿ ಸತ್ಯದೊಡನೆ ಪ್ರಯೋಗ ಎಂಬ ಮಾತಿನಂತೆ ಮುಖಾಮುಖಿಗೊಳಿಸುವ ಕಾರ್ಯಕ್ರಮವಾಗಿದೆ. ಗಾಂಧಿ ಮತ್ತು ಶಾಸ್ತ್ರೀ ಅವರ ಜೀವನ ತತ್ವಗಳನ್ನು ಆಚರಣೆ ಮತ್ತು ಪಾಲನೆಯೇ ಅವರಿಗೆ ಸಲ್ಲಿಸುವ ಗೌರವವಾಗಿದೆ. ಸರಳ ಜೀವನ ಮತ್ತು ಮಾನವೀಯ ಸಂಭಂದಗಳಿಗೆ ಅವರು ನೀಡಿದ ಮಹತ್ವ ಪ್ರತಿಯೊಬ್ಬರಿಗೂ ಆದರ್ಶಪ್ರಾಯ ಎಂದರು.

ಕಾರ್ಯಕ್ರಮದ ಅಂಗವಾಗಿ ಕುಲಪತಿ ಪ್ರೊ. ದಯಾನಂದ ಅಗಸರ ನೇತೃತ್ವದಲ್ಲಿ ವಿಶ್ವವಿದ್ಯಾಲಯ ಆವರಣ ಹಾಗೂ ವಿವಿಧ ವಿಭಾಗಗಳ ಸುತ್ತಲ್ಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಲಾಯಿತು. ನಂತರ ವಿಶ್ವವಿದ್ಯಾಲಯದಲ್ಲಿ ಸೇವಾ ಬದ್ಧತೆ ಮತ್ತು ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿರುವ ಬೋಧಕೇತರ ಸಿಬ್ಬಂದಿ ರಮಣ ಗನಟೆ, ಶರಣು, ನಾಗರಾಜ ಕೊಟ್ರೆ, ಚಾಂದಪಾಷಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ, ಶಿಕ್ಷಣ ನಿಕಾಯದ ಡೀನ್ ಪ್ರೊ. ಹೂವಿನ ಬಾವಿ ಬಾಬಣ್ಣ, ಕಲಾ ನಿಕಾಯದ ಡೀನ್ ಪ್ರೊ. ಅಬ್ದುಲ್ ರಬ್ ಉಸ್ತಾದ್, ಕಾನೂನು ನಿಕಾಯದ ಡೀನ್ ಪ್ರೊ. ದೇವಿದಾಸ ಮಾಲೆ, ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದ ಡೀನ್ ಪ್ರೊ. ಎ.ಪಿ. ಹೊಸಮನಿ, ಆಡಳಿತ ವಿಶೇಷಾಧಿಕಾರಿ ಪ್ರೊ. ಚಂದ್ರಕಾಂತ್ ಕೆಳಮನಿ, ಪ್ರೊ. ಬಸವರಾಜ ಸಣ್ಣಕ್ಕಿ, ಪ್ರೊ. ಜಿ.ಎಂ. ವಿದ್ಯಾಸಾಗರ, ಪ್ರೊ. ಕೆರೂರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವಿವಿಧ ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ, ಅತಿಥಿ ಅಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಗೀತ ವಿಭಾಗದ ಡಾ. ಲಕ್ಷ್ಮಿಶಂಕರ ಜೋಷಿ ಹಾಗೂ ತಂಡದವರು ಗಾಂಧೀಜಿ ಅವರಿಗೆ ಪ್ರಿಯವಾದ ಗೀತೆಗಳನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ರಮೇಶ್ ಲಂಡನಕರ್ ಅತಿಥಿಗಳನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ವಿಭಾಗದ ಪ್ರಾಂಶುಪಾಲರು ಹಾಗೂ ಸಂಯೋಜಕ ಡಾ. ಹನುಮಂತ ಜಂಗೆ ವಂದಿಸಿದರು. ಅಣವೀರಗೌಡ ಬಿರಾದಾರ ಕಾರ್ಯಕ್ರಮ ನಿರ್ವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here