ಮನ್ನೂರ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ

0
34

ಕಲಬುರಗಿ: ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನ್ನೂರ ಮಲ್ಟಿಸ್ಪೇಷಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರುಕ್ ಅಹ್ಮದ ಹೇಳಿದರು.

ಕಲಬುರಗಿ ನಗರದ ರಿಂಗ್ ರಸ್ತೆಯಲ್ಲಿರುವ ಮನ್ನೂರ ಮಲ್ಟಿಸ್ಪೇಷಷಾಲಿಟಿ ಆಸ್ಪತ್ರೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತ ಖಾಯಿಲೆಗಳಾಗಿದ್ದು, ಬಡಜನರು ರ‍್ಥಿಕವಾಗಿ ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ. ನಾನು ಕೂಡ ಗ್ರಾಮೀಣ ಹಳ್ಳಿ ಹಿನ್ನೆಲೆಯಿಂದ ಬಂದಿದ್ದೇನೆ. ಬಡತನದ ಪರಿಚಯವೂ ನನಗೆ ಇದ್ದು ಒಂದು ಉನ್ನತ ಸ್ಥಾನದ ಹೊಣೆ ಹೊಂದಿದ ಮೇಲೆ ಬಡ ಜನರ ಸೇವೆಯನ್ನು ಅವರ ಋಣವನ್ನು ಈ ರೀತಿಯ ಆರೋಗ್ಯ ಶಿಬಿರಗಳ ಮೂಲಕವೇ ತೀರಿಸಲು ಸಾಧ್ಯ ಎಂಬುದನ್ನು ಅರಿತಿದದೇನೆ ಎಂದರು.

Contact Your\'s Advertisement; 9902492681

ಉಚಿತ ಆರೋಗ್ಯ ತಪಾಸಣೆಯಲ್ಲಿ 350ಕ್ಕೂ ಅಧಿಕ ಜನರು ತಪಾಸಣೆ ಮಾಡಿಕೊಂಡಿದ್ದಾರೆ, ಇದರಲ್ಲಿ 4-5 ಜನರು ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇದ್ದು ಅವರಿಗೆ ಆಸ್ಪತ್ರೆ ವತಿಯಿಂದ 50% ರಿಯಾಯಿತಿ ನೀಡಲು ನರ‍್ಧರಿಸಲಾಗಿದೆ. -ಡಾ. ಫಾರುಕ್ ಅಹ್ಮದ ಮನ್ನೂರ, ಮುಖ್ಯಸ್ಥರು ಮನ್ನೂರ ಮಲ್ಟಿಸ್ಪೇಷಷಾಲಿಟಿ ಆಸ್ಪತ್ರೆ ಕಲಬುರಗಿ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here