ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

0
22

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ವಿಶೇಷ ಉಪನ್ಯಾಸ ನೀಡಲು ಆಗಮಿಸಿರುವ ಇತಿಹಾಸ ತಜ್ಞರು ಹಾಗೂ ಪ್ರಾಧ್ಯಾಪಕರಾದ ಡಾ.ಶಶಿಶೇಖರ ರಡ್ಡಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಹೋರಾಟದ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬದುಕಿನ ಬಗ್ಗೆ ಸವಿಸ್ತಾರವಾಗಿ ಹೇಳಿದರು.

Contact Your\'s Advertisement; 9902492681

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಅವರು ವಹಿಸಿದರು. ಅತಿಥಿಗಳಾಗಿ ಡಾ.ವಿಜಯಕುಮಾರ ಸಾಲಿಮನಿ, ಡಾ.ರಾಜಕುಮಾರ ಸಲಗರ, ಡಾ ದವಲಪ್ಪ, ಡಾ. ಅರುಣಕುಮಾರ ಸಲಗರ ಅವರು ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ ಸುರೇಶ ಮಾಳೆಗಾಂವ, ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾದ ಡಾ.ನಾಗಪ್ಪ ಗೋಗಿ,ಡಾ.ಬಲಭೀಮ ಸಾಂಗ್ಲಿ,ಡಾ ಶಿವಲಿಂಗಪ್ಪ ಪಾಟೀಲ ಮತ್ತು ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕರಾದ ಶ್ರೀ.ಅಜಯ್ ಸಿಂಗ್ ವೇದಿಕೆ ಮೇಲೆ ಉಪಸ್ಥಿತರಿದ್ದರು. ಡಾ.ಶಾಮಲಾ ಸ್ವಾಮಿ ಪ್ರಾರ್ಥಿಸಿದರು.

ಡಾ.ನಾಗಪ್ಪ ಗೋಗಿ ಸ್ವಾಗತಿಸಿದರು. ಡಾ.ಸುರೇಶ ಮಾಳೆಗಾಂವ್ ವಂದಿಸಿದರು. ಡಾ.ಬಲಭೀಮ ಸಾಂಗ್ಲಿ ಅವರು ನಿರೂಪಿಸಿದರು. ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ಮತ್ತು ಸಿಬ್ಬಂದಿತೇರ ವರ್ಗದವರು, ವಿದ್ಯಾರ್ಥಿಗಳು ಹಾಗೂ ಎನ್ ಎಸ್ ಎಸ್ ಸ್ವಯಂಸೇವಕರು ಭಾಗವಹಿಸಿದ್ದರು. ಗಾಂಧಿ ಜಯಂತಿಯ ಅಂಗವಾಗಿ ಕಾಲೇಜಿನ ಐದು ಜನ ಸಿಬ್ಬಂದಿತೇರ ವರ್ಗಕ್ಕೆ ವಿಶೇಷವಾಗಿ ಅತಿಥಿಗಳಿಂದ ಸನ್ಮಾನಿಸಲಾಯಿತು.

ಇದಲ್ಲದೆ ಕಾಲೇಜಿನ ಎನ್.ಎಸ್. ಎಸ್ ಸ್ವಯಂಸೇವಕರಿಗೆ ನೋಟ್ ಬುಕ್ ಮತ್ತು ಪೆನ್ನನ್ನು ಅತಿಥಿಗಳಿಂದ ವಿತರಿಸಲಾಯಿತು. ಈ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here