ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

0
105

ಕಲಬುರಗಿ: ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಯಶವಂತಪುರ-ಸೋಲಾಪುರ ಎಕ್ಸ್‌ಪ್ರೆಸ್ ರೈಲಿನ ಮೂಲಕ ಗುರುವಾರ ಅಕ್ಟೋಬರ್ 17 ರಂದು ಬೆಳಿಗ್ಗೆ 6.25 ಗಂಟೆಗೆ ಕಲಬುರಗಿಗೆ ಆಗಮಿಸುವರು.

ನಂತರ ಅವರು ಅಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮುಖ್ಯಮಂತ್ರಿಗಳೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ೪ ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.

Contact Your\'s Advertisement; 9902492681

ಶುಕ್ರವಾರ ಅಕ್ಟೋಬರ್ 18 ರಂದು ಬೆಳಿಗ್ಗೆ 10 ಗಂಟೆಗೆ ಲೋಕೋಪಯೋಗಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಅಂದು ರಾತ್ರಿ ೭ ಗಂಟೆಗೆ ಉದ್ಯಾನ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here