ಹ್ಯಾಂಡ್‍ಬಾಲ್: ಕಲಬುರಗಿ ಪ್ರಥಮ ಸ್ಥಾನ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ನಡೆದ 14 ಮತ್ತು 17 ವರ್ಷದೊಳಗಿನವರ ಬಾಲಕ ಹಾಗೂ ಬಾಲಕಿಯರ ವಿಭಾಗ ಮಟ್ಟದ ಹ್ಯಾಂಡ್‍ಬಾಲ್ ಪಂದ್ಯಾವಳಿಯಲ್ಲಿ ಕಲಬುರಗಿ ಜಿಲ್ಲೆಯ ಬಾಲಕ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದಿವೆ. ಕೊಪ್ಪಳ ಜಿಲ್ಲಾ ತಂಡಗಳು ದ್ವಿತೀಯ ಸ್ಥಾನ ಪಡೆದರು.

14 ವರ್ಷದೊಳಗಿನವರ ಬಾಲಕರ ವಿಭಾಗದಲ್ಲಿ ಕಲಬುರಗಿ ಜಿಲ್ಲಾ ತಂಡ ಪ್ರಥಮ ಸ್ಥಾನ ಪಡೆದರೆ, ಕೊಪ್ಪಳ ಜಿಲ್ಲೆ ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಕಲಬುರಗಿ ತಂಡವು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಅದೆ ರಿತಿ 17 ವರ್ಷದ ಬಾಲಕ ಮತ್ತು ಬಾಲಕಿ ಕಲಬುರಗಿ ಪ್ರತಮ ಸ್ಥಾನ ಪಡೆದರು.

ಬೀದರ್, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ತಂಡಗಳು ಪಾಲ್ಗೊಂಡಿದ್ದವು. ವಿಭಾಗ ಮಟ್ಟದ ಹ್ಯಾಂಡ್‍ಬಾಲ್ ಪಂದ್ಯಾವಳಿಗೆ ಉಪನಿರ್ದೇಶಕ ಸೂರ್ಯ ಕಾಂತ ಮದಾನೆ ಚಾಲನೆ ನೀಡಿದರು.
ಶಾಸಕ ಅಲ್ಲಮಪ್ರಭು ಪಾಟೀಲ ಅವರು ವಿಜೇತರಾದ ಕ್ರಿಡಾಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಟ್ರೋಫಿ, ಪಾರಿತೋಷಶವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ರಾಜಶೇಖರ ಗೋನಾಯ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಸವರಾಜ ರಟಕಲ್, ಶಿವಶರಣಪ್ಪ ಮಂಠಾಳೆ, ರಾಜು ದೊಡ್ಡಮನಿ, ಸಂತೋಷ ಕುಲಕರ್ಣಿ, ಈರಣ್ಣ ಪಾಟೀಲ ಝಳಕಿ, ಸಂತೋಷ ಪಾಟೀಲ ಡನ್ನೂರ್, ಅರುಣಕುಮಾರ, ದತ್ತಾತ್ರೇಯ ಜೇವರ್ಗಿ, ಉಮೇಶ ಶರ್ಮಾ, ಸಂತೋಷ ಭಾವಿಮನಿ, ವೈಜನಾಥ ವಾಲಿ, ದತ್ತು ಸುಳದ, ಅಶೋಕ, ದೀಲಿಪ, ಸಂತೋಷ ಕೋಬಾಳ, ಪುನಿತ್, ಬಸವರಾಜ, ಉಪ ನಿರ್ದೇಶಕ ಕಚೇರಿಯ ದಶರಥ ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

11 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

11 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

13 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

13 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

13 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

13 hours ago