ಕಲಬುರಗಿ: ಶರಣರ ಅನುಬಾವಗಳಿಂದ ಹೊರ ಹೊಮ್ಮಿರುವ ವಚನಗಳು ಮಾನವೀಯ ಮೌಲ್ಯ ಹೆಚ್ಚಳಕ್ಕೆ ಪೂರಕವಾಗಿವೆ ಎಂದು ನಿವೃತ್ತ ಪ್ರಾಚಾರ್ಯರಾದ ಪ್ರೊ. ನಿಂಗಮ್ಮ ಪತಂಗೆ ಹೇಳಿದರು.
ನಗರದ ಸಮಾಧಾನದಲ್ಲಿ ಗುರುದೇವ ಸೇವಾ ಸಂಸ್ಥೆ ಹಾಗೂ ಚತುರಾ ಫೌಂಡೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ಇವರ ಆಶ್ರಯದಲ್ಲಿ ಕಲಬುರಗಿ ಉತ್ತರ- ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ವಲಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ವಚನ ಸ್ಪರ್ಧೆಯ ತೀರ್ಪುಗಾರರಾಗಿ ಮಾತನಾಡಿದರು.
ನಾವಿಂದು ಆಧುನಿಕ ಕಾಲದಲ್ಲಿ ಶಿಕ್ಷಣವಂತರಾಗುತ್ತಿದ್ದೇವೆ. ಆದರೆ ಸಂಸ್ಕಾರದಿಂದ ದೂರಾಗುತ್ತಿದ್ದೇವೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ವಚನಗಳ ಸ್ಪರ್ಧೆ ಆಯೋಜಿಸಿರುವುದು ಮಾದರಿಯಾಗಿದೆ ಎಂದರು.
ಸರ್ವಜ್ಞ, ಬಸವಣ್ಣ, ಅಲ್ಲಮಪ್ರಭು, ಅಂಬಿಗರ ಚೌಡಯ್ಯ, ಅಕ್ಕಮಹಾದೇವಿ, ಮೌನಯೋಗಿ ಜಡೆಯೊಡೆಯ ತ್ರಿಪದಿಗಳು ಸೇರಿ ಅನೇಕ ಶರಣರ ವಚನಗಳನ್ನು ವಿದ್ಯಾರ್ಥಿಗಳನ್ನು ಪ್ರಸ್ತುತಪಡಿಸಿದರು. 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಚನಗಳ ವಾಚನ ಮಾಡಿದರು.
ರವೀಂದ್ರನಾಥ ಭಂಟನಳ್ಳಿ, ಮಲ್ಲಿಕಾರ್ಜುನ ಬಗಲಿ ಸಹ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಎ.ಬಿ. ಪಾಟೀಲ್ ಬಮನಳ್ಳಿ ನಿರೂಪಿಸಿ, ವಂದಿಸಿದರು ಹಣಮಂತರಾವ ಭೈರಾಮಡಗಿ ಪ್ರಾಸ್ತಾವಿಕ ಮಾತನಾಡಿದರು. ಕುಮಾರಶೆಟ್ಟಿ ಸ್ವಾಗತಿಸಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…