ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದ ಶ್ರೀ.ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ಪ್ರಥಮ ಕಾರ್ಯಾನಿರ್ವಾಹಕ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಸಹಾಯಕ ಚುನಾವಣಾ ಅಧಿಕಾರಿಗಳಾದ ಶಿವಕುಮಾರ ಮಸ್ಕಿಯವರು ವಿಕ್ಷಕರಾಗಿ ಭಾಗವಹಿಸಿ ಆಯ್ಕೆಯಾದ ನೂತನ ಸದಸ್ಯರಿಗೆ ಪ್ರಮಾಣಪತ್ರ ನೀಡಿ ಅಭಿನಂದಿಸಿದರು.
ಕೇಂದ್ರ ಸಮಿತಿಯ ಆದೇಶಾನುಸಾರ ಆಯ್ಕೆ ಮಾಡಿದ್ದು, ಉಪಾಧ್ಯಕ್ಷರಾಗಿ ಶಿವನಗೌಡ ತಿರುಪತಿ ಬಿರಾದರ ಸೂಗುರು, ಸುನೀತಾ ಸಿದ್ದನಗೌಡ ಪಾಟೀಲ್ ದೇವಾಪೂರ, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ ಎನ್.ಪಾಟೀಲ್, ಕೋಶಾಧ್ಯಕ್ಷರಾಗಿ ಅಮರಯ್ಯ ಸ್ವಾಮಿ ಕಡ್ಲೆಪ್ಪಮಠ, ಕಾರ್ಯದರ್ಶಿಗಳಾಗಿ ರೆವಣಸಿದ್ದಪ್ಪ ಎಂ. ರೆವಡಿ ಹುಣಸಗಿ, ಶ್ರೀದೇವಿ ಗೀರಿಶ ಸಜ್ಜನ್ ರಂಗಂಪೇಟ ಇವರನ್ನು ಒಮ್ಮತದಿಂದ ಆಯ್ಕೆಮಾಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾಸಭೆಯ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳಿ,್ಳ ಮುಂದಿನ ದಿನಗಳಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸುರಪುರ ಮತ್ತು ಹುಣಸಗಿ ತಾಲೂಕಿನ ವೀರಶೈವ ಲಿಂಗಾಯತ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗುತ್ತಿದೆ ಎಂದ ಅವರು ಬರುವ ದಿನಗಳಲ್ಲಿ ಸದಸ್ಯತ್ವ ಅಭಿಯಾನ, ಮಹಿಳಾ ಘಟಕ, ಯುವ ಘಟಕ, ನಗರ ಘಟಕಗಳ ಪ್ರಾರಂಭ ಸೇರಿದಂತೆ ಅನೇಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಮಹಾಸಭೆಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮಲ್ಲಣ್ಣ ಸಾಹುಕಾರ ಜಾಲಿಬೆಂಚಿ, ದೇವಿಂದ್ರಪ್ಪಗೌಡ ಮಾಲಗತ್ತಿ, ಮಲ್ಲಿಕಾರ್ಜುನಸ್ವಾಮಿ ಜೆರಟಗಿಮಠ, ಪ್ರಕಾಶ ಅಂಗಡಿ ಹೆಮ್ಮಡಗಿ, ನಿಲಾಂಬಿಕೆ ಸಿದ್ದನಗೌಡ ಪಾಟೀಲ್ ಸೇರಿದಂತೆ ಇತರರಿದ್ದರು.