ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

0
37

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಅವರು ನಗರದ ಹಳೇಶಹಾಬಾದನ ವೀರಭದ್ರೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾದ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಗ್ರಾಮೀಣ ಪ್ರದೇಶದ ರೈತರಿಗೆ ಹಾಗೂ ಬಡಜನರಿಗೆ ತುಂಬಾ ಅನುಕೂಲವಾಗಲಿದೆ.ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬಹುದು. ಸಹಕಾರ ಸಂಘಗಳ ಮುಖ್ಯಸ್ಥರು ಪಾರದರ್ಶಕವಾಗಿ ಆಡಳಿತ ನಡೆಸಿದಾಗ ಮಾತ್ರ ಸಹಕಾರಿ ಸಂಘಗಳು ಆರ್ಥಿಕವಾಗಿ ಬೆಳವಣಿಗೆ ಹೊಂದುವುದರ ಜತೆಗೆ μÉೀರುದಾರರಿಗೆ ಆದಾಯ ನೀಡಲು ಸಾಧ್ಯ.ಆ ನಿಟ್ಟಿನಲ್ಲಿ ಇಲ್ಲಿನ ಸಂಘದ ಉತ್ತಮವಾಗಿ ಬೆಳವಣಿಗೆ ಹೊಂದಲಿ ಎಂದು ಆಶಿಸುವೆ ಎಂದರು.

ಕಲಬುರ್ಗಿ ಮತ್ತು ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸೋಮಶೇಖರ್ ಗೋನಾಯಕ ಮಾತನಾಡಿ,
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಬಡ ಹಾಗೂ ಮಧ್ಯಮವರ್ಗದ ಕೃಷಿಕರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿವೆ. ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಸಹಕಾರಿ ಕ್ಷೇತ್ರ ವಾಣಿಜ್ಯ ಬ್ಯಾಂಕ್‍ಗಳಿಗಿಂತ ಭಿನ್ನವಾಗಿ ನಡೆಸುತ್ತಿವೆ. ಸಂಘದಿಂದ ಸಾಲ ಪಡೆದುಕೊಂಡು ಟ್ರ್ಯಾಕ್ಟರ್, ಹೈನುಗಾರಿಕೆ ಹಾಗೂ ನೀರಾವರಿ ಸೇರಿದಂತೆ ಇನ್ನೀತರ ಕೃಷಿ ಚಟುವಟಿಕೆಗೆ ಹಣ ಬಳಸಿಕೊಳ್ಳಬಹುದು.ರೈತರಿಗೆ ಸಾಕಷ್ಟು ಸೌಲಭ್ಯ ನೀಡಲಾಗುತ್ತಿದೆ.ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ ಸಬಲರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಶಿವೂಗೌಡ.ಎನ್.ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.ಕಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್,ಬಿಜೆಪಿ ಮಾಜಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಕಲಬುರ್ಗಿ ಸಹಕಾರ ಸಂಘಗಳ ಜಂಟಿ ನಿಭಂದಕ ವಿಶ್ವನಾಥ ಎಮ್ ಮಲಕೂಡ, ನಗರಸಭೆ ಅಧ್ಯಕ್ಷೆ ಚಂಪಾಬಾಯಿ ರಾಜು ಮೇಸ್ತ್ರಿ, ಪ್ರಮುಖರಾದ ಗುರುರಾಜ ಮಾಲಿ ಪಾಟೀಲ್ , ಭೀಮರಾವ ಸೂಗುರ, ಅಬ್ದುಲ್ ರೆಹಮಾನ್ ಜಮಾದಾರ, ಮಹಾಂತಗೌಡ ಪಾಟೀಲ್ , ಮಲ್ಲಿಕಾರ್ಜುನ ವಾಲಿ, ಶಿವಕುಮಾರ ನಾಟೀಕಾರ, ಬಸಣ್ಣ ಹಡಪದ, ಬಸವಣ್ಣಪ್ಪ ಎ ವಾಲಿ, ಶರಣಪ್ಪ ಬಿ ಬುಗಶೆಟ್ಟಿ, ಶರಣಪ್ಪ ಎಸ್ ಕೊಡದೂರ, ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೊಳಕರ್, ಶಹಾಬಾದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಕುಂಬಾರ ಸೇರಿದಂತೆ ಸಂಘದ ಸದಸ್ಯರು ಗಣ್ಯರು ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here