ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲಬುರಗಿಯ ಹಾಲು ಗುಣಮಟ್ಟದಿಂದ ಕೂಡಿರುವುದರಿಂದ ನೆರೆಯ ಮಹಾರಾಷ್ಟ್ರದವರು ಪೂರೈಕೆ ಮಾಡಲು ಬೇಡಿಕೆ ಸಲ್ಲಿಸಿದ್ದಾರೆ. ಈಗ ದಿನಕ್ಕೆ ಹದಿನೈದು ಸಾವಿರ ಲೀಟರ್ ಹಾಲು ಪೂರೈಕೆಯಾಗುತ್ತಿದ್ದು ಇದರಿಂದ ಈ ಸಹಕಾರಿ ಒಕ್ಕೂಟ ಆರ್ಥಿಕ ಬಲ ಬಂದಂತಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
” ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನೋದ್ಯಮಕ್ಕೆ ಆದ್ಯತೆ ನೀಡುವುದು ನಮ್ಮ ಸರ್ಕಾರದ ಧ್ಯೇಯವಾಗಿದ್ದು, ರೈತರು, ಅನ್ನದಾತರ ಏಳಿಗೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಹೈನುಗಾರಿಕೆಯಲ್ಲಿ ಇನ್ನಷ್ಟು ಸಾಧನೆಯನ್ನು ನಿರೀಕ್ಷಿಸಬಹುದಾಗಿದೆ” ಎಂದು ಅವರು ಹೇಳಿದ್ದಾರೆ.