ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ ಗೊತ್ತು ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಆರೋಪಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಹಳ ವರ್ಷಗಳಿಂದ ಖರ್ಗೆ ಅವರು ಚುನಾವಣೆ ಬಂದಾಗೊಮ್ಮೆ ಗಿಮಿಕ್ ಮಾಡಿ‌ ಮತಗಳನ್ನು ಪಡೆಯುವುದರ ಮೂಲಕ ಜನರಿಗೆ ಮೋಸ ಮಾಡುತ್ತಲೇ ಬಂದಿದ್ದಾರೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಜನರು, ಅದರಲ್ಲಿ ಕಲಬುರಗಿ ಮತ್ತು ಯಾದಗಿರಿ ಜನರು ಖರ್ಗೆ ಅವರು ಚುನಾವಣೆ ಸಂದರ್ಭದಲ್ಲಿ ಉಪಯೋಗ ಮಾಡುವ ಗಿಮಿಕ್’ಗೆ ಮತದಾರರು ಒಳಗಾಗಬಾರದು. ಪಟ್ಟಣ, ಗ್ರಾಮಗಳು ಅಭಿವೃದ್ಧಿಯಾಗಬೇಕಾದರೇ ಗಿಮಿಕ್ ಮಾಡುವವರನ್ನು ದೂರ ಮಾಡಿ ಮುಂದಿನ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಯುನಿವರ್ ಸಿಟಿಯಿಂದ 19 ಎಕರೆ ಜಮೀನು ಖರೀದಿ ಮಾಡಿ, ಅದಕ್ಕೆ ಹಣ ಕೂಡ ತುಂಬಿಲ್ಲ. ಸರ್ಕಾರ ಹಣ ಕಟ್ಟಬೇಕು ಎಂದು ಆದೇಶ ಮಾಡಿದ್ರೂ ಇಲ್ಲಿಯ ತನಕ ಹಣ ತುಂಬಿಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡು ನೂರಾರು ಕೋಟಿ ಆಸ್ತಿ ಮಾಡಿಕೊಂಡಿದ್ದಾರೆ. ನಿಮ್ಮಂತ ನಾಲಾಯಕರು, ಹಗರಣಗಾರರು, ಭ್ರಷ್ಟರು ಇಡೀ ಭಾರತ ದೇಶದಲ್ಲೇ ಸಿಗಲ್ಲ ಎಂದು ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಚಿಂಚೋಳಿಯಲ್ಲಿ ಸಕ್ಕರೇ ಕಾರ್ಖಾನೆ ಸ್ಥಾಪನೆ ಮಾಡಿ ರೈತರಿಗೆ ಅನುಕೂಲ ಮಾಡಿ ಉದ್ಯೋಗ ಸೃಷ್ಠಿಸಬೇಕು ಎಂದು ಅನೇಕ ಭಾರಿ ರೈತರು ತಮ್ಮ ಅಳಲನ್ನು ತೋಡಿಕೊಂಡರು ಇಲ್ಲಿಯವರೆಗೆ ಅದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಆದರೆ ಕಲಬುರಗಿ ಜಿಲ್ಲೆಯಲ್ಲಿ ಸಿಮೆಂಟ್ ಕಂಪೆನಿಗಳನ್ನು ಒಂದರ ಮೇಲೆ ಒಂದರಂತೆ ಸ್ಥಾಪನೆಯಾಗುತ್ತಿವೆ. ಸಿಮೆಂಟ್ ಕಂಪೆನಿಯವರು ಹೊರ ಹಾಕುವ ಹೊಗೆಯಿಂದ ರೈತರ ಹೊಲಗಳು, ಜನರು ಹಾಗೂ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುತ್ತಿದೆ. ಆದರೆ ಸಕ್ಕರೆ ಕಾರ್ಖಾನೆಯಿಂದ ಯಾವುದೇ ತೊಂದರೆ ಆಗದಿದ್ದರೂ ಸ್ಥಾಪನೆ ಮಾಡಲು ಅನುಮತಿ‌ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಚಿತ್ತಾಪುರಲ್ಲಿ ಈಗಾಗಲೇ ಸದಸ್ಯತ್ವ ಅಭಿಯಾನ ಶುರುವಾಗಿದೆ. ಸದಸ್ಯತ್ವ ಅಭಿಯಾನವನ್ನು ಯಶಸ್ವಿ ಮಾಡಲು ಪ್ರಮಾಣ ಮಾಡಲಾಗಿದೆ. ಅ.15ರ ಒಳಗಾಗಿ ಕ್ಷೇತ್ರದಲ್ಲಿ ಒಟ್ಟು 50 ಸಾವಿರಕ್ಕೂ ಹೆಚ್ಚು ಜನರಿಗೆ ಸದಸ್ಯತ್ವ ಅಭಿಯಾನ ಸದಸ್ಯರನ್ನಾಗಿ ಮಾಡಲಾಗುವುದು. ಬಿಜೆಪಿ ತಾಲೂಕು ಅಧ್ಯಕ್ಷರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಯೊಂದು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಯ ಜನರ ಜೊತೆ ಚರ್ಚಿಸಿ ಸಮಸ್ಯೆಗಳನ್ನು ಆಲಿಸುವ ಕೆಲಸ ಪ್ರಮಾಣಿಕವಾಗಿ ಮಾಡಲಾಗುವುದು ಎಂದರು.

ಬಿಜೆಪಿ ಮಂಡಲ ಉಸ್ತುವಾರಿ ಶರಣಪ್ಪ ತಳವಾರ್ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷರು ಮುಂದಿನ ದಿನಗಳಲ್ಲಿ ಚಿತ್ತಾಪುರ ಕ್ಷೇತ್ರಕ್ಕೆ ಬರುವವರಿದ್ದಾರೆ. ಈ ಭಾಗದ ಅಭಿವೃದ್ಧಿ ಮತ್ತು ಸರ್ಕಾರದ ಕಣ್ಣು ತೆರೆಸುವ ಸಲುವಾಗಿ ಅವರ ನೇತೃತ್ವದಲ್ಲಿ ಹೋರಾಟ ಹಮ್ಮಿಕೊಳ್ಳುವ ತಿರ್ಮಾನ ಕೈಗೊಂಡಿದ್ದೇವೆ. ಹೀಗಾಗಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮೇಲ್ಲ ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ಪ್ರತಿಭಟನೆಯಲ್ಲಿ ಪಾಲ್ಗೋಳ್ಳಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಲಿಂಗಾರೆಡ್ಡಿ ಭಾಸರೆಡ್ಡಿ, ಮಲ್ಲಿಕಾರ್ಜುನ ಎಮ್ಮೇನೂರ್, ಚಂದ್ರಶೇಖರ ಆವಂಟಿ, ಶರಣಗೌಡ, ನಾಗರಾಜ ಹೂಗಾರ, ಶ್ರೀಕಾಂತ ಸುಲೇಂಗಾವ, ಅಶ್ವಥ ರಾಠೋಡ, ಮಲ್ಲಿಕಾರ್ಜುನ ಮಾಲಗತ್ತಿ, ಡಾ. ಮಹೇಂದ್ರ ಕೋರಿ, ಮಹ್ಮದ್ ಯೋನೂಸ್, ಶಿವರಾಮ ಚವ್ಹಾಣ ಸೇರಿದಂತೆ ಇತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago