ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ ಪ್ರದೇಶದ ವಿವಿಧ ಕೈಗಾರಿಕಾ ಘಟಕಗಳಿಗೆ ಭೇಟಿ ನೀಡಿ ಉದ್ಯಮಿದಾರರ ಜೊತೆಗೆ ಸಂವಾದ-ಸಮಾಲೋಚನೆ ನಡೆಸಿದಲ್ಲದೆ ಅವರ ಅಹವಾಲು ಆಲಿಸಿದರು.
ನಗರದ ಹೊರವಲಯದ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಕೈಗಾರಿಕಾ ಪ್ರದೇಶದ 3ನೇ ಹಂತದ ಕೈಗಾರಿಕಾ ಪ್ರದೇಶಕ್ಕೆ ಮೊದಲು ಭೇಟಿ ನೀಡಿದ ಅವರು, ಅಲ್ಲಿ ಕೈಗಾರಿಕಾಭಿವೃದ್ಧಿಗೆ 600 ಎಕರೆ ಭೂಮಿಯನ್ನು ಭೂಸ್ವಾಧೀನ ಪಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಿ ಕೆ.ಐ.ಎ.ಡಿ.ಬಿ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ನಂದೂರ-ಕೆಸರಟಗಿ ಪ್ರದೇಶದ 1ನೇ ಮತ್ತು 2ನೇ ಹಂತದಲ್ಲಿ ವಿನೂತನವಾಗಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕೆ.ಐ.ಎ.ಡಿ.ಬಿ. ಮೂಲಕ ನಿರ್ಮಿಸಲಾಗುತ್ತಿರುವ ಪ್ಲಗ್ ಎಂಡ್ ಪ್ಲೇ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ, ತ್ವರಿತಗತಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 50 ಎಕರೆ ಜಾಗದಲ್ಲಿರುವ ಗುಲಬರ್ಗಾ ಟೆಕ್ಸ್ ಟೈಲ್ ಪಾರ್ಕ್ಗೆ ಭೇಟಿ ನೀಡಿದಲ್ಲದೆ 40 ಎಕರೆ ಜಾಗದಲ್ಲಿರುವ ಮಹಿಳಾ ಪಾರ್ಕ್ಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಕ್ಕಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿದರು.
ಫ್ಲ್ಯಾಟ್ ಫ್ಯಾಕ್ಟರಿ ಸ್ಥಳಕ್ಕೂ ಭೇಟಿ: ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ ಪ್ರದೇಶದ 3ನೇ ಹಂತದಲ್ಲಿ ಸುಮಾರು 20 ಎಕರೆ ಜಾಗದಲ್ಲಿ ಹೊಸದಾಗಿ ಸ್ಥಾಪಿಸಲು ಉದ್ದೇಶಿಸಿರುವ ಕಲಬುರಗಿ ಅಟೋ ಪಾರ್ಕ್, ಐ.ಟಿ. ಹಬ್ ಹಾಗೂ ಫ್ಲ್ಯಾಟ್ ಫ್ಯಾಕ್ಟರಿ ಸ್ಥಳಕ್ಕೂ ಭೇಟಿ ನೀಡಿದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಭೂಮಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನೋಳಿ, ಉಪ ನಿರ್ದೇಶಕ ಅಬ್ದುಲ್ ಅಜೀಮ್, ಕೆ.ಐ.ಎ.ಡಿ.ಬಿ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಖಂಡ್ರೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪರಮೇಶ್ವರ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಶಂಕರ ಹಾಗೂ ಇತರೆ ಅಧಿಕಾರಿಗಳಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…