24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 23 ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2023 ಮತ್ತು 2024 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 23 ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ಈಗ 24 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದು. ಆಯ್ಕೆಯಾದ 5 ಕೃತಿಗಳಿಗೆ ತಲಾ 5 ಸಾವಿರ ನಗದು ಪುರಸ್ಕಾರ ಮತ್ತು ಸನ್ಮಾನ, ಗೌರವದ ಕಾಣಿಕೆ ನೀಡಿ ಸತ್ಕರಿಸಲಾಗುವುದು. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ “ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಪಿಡಬ್ಲ್ಯೂಡಿ ಕಚೇರಿ ಹತ್ತಿರ, ಸೇಡಂ – 585 222. ಕಲಬುರಗಿ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9731666052 ಸಂಪರ್ಕಿಸಬಹುದು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

1 hour ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

4 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

15 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

17 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

18 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420