ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅ.8 ರಂದು ಇಳಿಹೊತ್ತು 4.15 ಕ್ಕೆ ನಗರದ ಕನ್ನಡ ಭವನದ ಸಾಹಿತ್ಯ ಮಂಟಪದಲ್ಲಿ ದಸರಾ ಕಾವ್ಯ ಸಂಭ್ರಮ-2024 ನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಕವಿಗಳಾದವರು ಸಮಕಾಲೀನ ವಿಷಯಗಳ ಮೇಲೆ ಕಾವ್ಯ ರಚನೆ ಮಾಡುವ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ಹೊಂದಬೇಕಾಗಿದೆ. ಜಿಲ್ಲೆಯಲ್ಲಿ ಸಾಂಸ್ಕøತಿಕ ಪರಿಸರದ ನಿರ್ಮಾಣದತ್ತ ಪರಿಷತ್ತು ಹೊಸ ಹೊಸ ಹೆಜ್ಜೆ ಇಡುತ್ತಲಿದೆ ಎಂದು ಅವರು ವಿವರಿಸಿದರು.
ಹಿರಿಯ ಸಾಹಿತಿ ಸಿದ್ಧರಾಮ ಪೊಲೀಸ್ ಪಾಟೀಲ ಅವರು ಸಂಭ್ರಮಕ್ಕೆ ಚಾಲನೆ ನೀಡಲಿದ್ದು, ಹಿರಿಯ ಸಾಹಿತಿ ಡಾ. ಸುರೇಶ ಜಾಧವ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಮಾಜಿಕ ಚಿಂತಕಿ ಉಮಾ ಗಚ್ಚಿನಮನಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಕವಿಗಳು ತಮ್ಮ ಸ್ವ ರಚಿತ ಕವನ ವಾಚಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…