ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನವೆಂಬರ್ ಮೊದಲ ವಾರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿರುವ ಒಂದು ದಿನದ ಕಲಬುರಗಿ ಜಿಲ್ಲಾ ಪ್ರಥಮ ಜನಪದ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ವಿಚಾರಶೀಲ ಲೇಖಕಿ-ನಿವೃತ್ತ ಪ್ರಾಧ್ಯಾಪಕಿ ಸೇಡಮ್‍ನ ಪ್ರೊ. ಶೋಭಾದೇವಿ ಚೆಕ್ಕಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಎಲ್ಲಾ ಪ್ರಕಾರಗಳಿಗೂ ಜನಪದ ಸಾಹಿತ್ಯವೇ ಮೂಲವಾಗಿದೆ. ಸಮಾಜದ ಸಾಂಸ್ಕøತಿಕ, ಸಾಮಾಜಿಕ ಅಂಶಗಳನ್ನು ಒಳಗೊಂಡಿರುವ ಜನಪದ ಸಾಹಿತ್ಯ , ಕಲೆಗಳಲ್ಲಿ ಉತ್ತಮ ಮಾರ್ಗದರ್ಶನವನ್ನೂ ಸಹ ಕಾಣಬಹುದಾಗಿದೆ. ಈ ನಿಟ್ಟಿನಲ್ಲಿ ಜನಪದ ಸಾಹಿತ್ಯದ ತಿಳಿವು ಇಂದಿನ ಸಮಾಜಕ್ಕೆ ಮುಟ್ಟಿಸುವ ಪ್ರಯತ್ನ ಈ ಸಮ್ಮೇಳನದ್ದಾಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.
ಪರಿಷತ್ತಿನ ಆಶ್ರಯದಲ್ಲಿ ಜಿಲ್ಲೆಯಲ್ಲಿ ಈವರೆಗೆ ಆಗಿರದ ವಿಶೇಷ ಸಮ್ಮೇಳನಗಳನ್ನು ಪ್ರಥಮ ಬಾರಿಗೆ ಹಮ್ಮಿಕೊಳ್ಳುತ್ತಾ ಬರುತ್ತಿರುವ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಳೆದ ಎರಡೂವರೆ ವರ್ಷದಲ್ಲಿ ವಿಶೇಷ ಮತ್ತು ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಪರಿಷತ್ತು ಜನಸಾಮಾನ್ಯರ ಪರಿಷತ್ತನ್ನಾಗಿ ನಿರ್ಮಿಸುವ ಸಂಕಲ್ಪ ತೊಡಲಾಗಿದೆ ಎಂದು ವಿವರಿಸಿದ್ದಾರೆ.
ಸರ್ವಾಧ್ಯಕ್ಷರಾದ ಪ್ರೊ. ಚೆಕ್ಕಿ ಅವರ ಪರಿಚಯ ಹೀಗಿದೆ; ಸೇಡಮ್ ನ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ನೃಪತುಂಗ ಪದವಿ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸುಮಾರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ ಪ್ರೊ. ಶೋಭಾದೇವಿ ಚೆಕ್ಕಿ ಅವರು ಸುಮಾರು 55 ಕ್ಕೂ ಹೆಚ್ಚು ಕೃತಿಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ಮತ್ತು ಸಮಾಜಶಾಸ್ತ್ರ ವಿಭಾಗಕ್ಕೆ ನೀಡಿದ್ದಾರೆ. ಮಹಿಳಾ ಸಬಲೀಕರಣದಲ್ಲಿಯೂ ಉತ್ತಮ ಕಾರ್ಯ ಮಾಡಿದ್ದಾರೆ.
ಪ್ರೊ. ಚೆಕ್ಕಿ ಯವರು ಹುಟ್ಟಿ ಬೆಳೆದದ್ದು ಕಲಬುರಗಿಯ ಒಕ್ಕಲಗೇರಿಯ ಚೆಕ್ಕಿ ಕುಟುಂಬದಲ್ಲಿ. ಅವಿಭಕ್ತ ಕುಟುಂಬದಲ್ಲಿ ಬೆಳೆದು ಉತ್ತಮ ಸಂಸ್ಕಾರ ಪಡೆದು ಶರಣ ಸಾಹಿತ್ಯದ ಅಭಿರುಚಿ ಬೆಳೆಸಿಕೊಂಡವರು.ಸದಾ ಕ್ರಿಯಾಶೀಲವಾಗಿರುವ ಪ್ರೊ. ಶೋಭಾದೇವಿ ಚೆಕ್ಕಿ ಯವರು ವಚನ ಸಾಹಿತ್ಯ ಹಾಗೂ ಜನಪದ ಸಾಹಿತ್ಯಕ್ಕೆ ಸುಮಾರು 35 ಕ್ಕೂ ಹೆಚ್ಚು ಅಮೂಲ್ಯವಾದ ಕೃತಿಗಳನ್ನು ರಚಿಸಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ.
ಶರಣ ಸಾಹಿತ್ಯ ಪರಿಷತ್ತಿನ ಸೇಡಮ್ ತಾಲೂಕಾಧ್ಯಕ್ಷರಾಗಿ, ಶಾಂಭವಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಅಧ್ಯಕ್ಷೆಯಾಗಿ, ಗುಲಬರ್ಗ ವಿಶ್ವವಿದ್ಯಾಲಯದ ಅಧ್ಯಯನ ಮಂಡಳಿಯ ಸದಸ್ಯೆಯಾಗಿ, ಪರೀಕ್ಷಾ ಮಂಡಳಿಯ ಅಧ್ಯಕ್ಷೆಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅಧ್ಯಯನ, ಅಧ್ಯಾಪನ, ವಿದ್ಯಾರ್ಥಿಗಳೊಂದಿಗೆ ಒಡನಾಟ, ಹೊಲಿಗೆ, ತೋಟಗಾರಿಕೆ, ಜಾನಪದ ಹಾಡುಗಾರಿಕೆ, ಪ್ರವಾಸ ಹೀಗೆ ಹತ್ತು ಹಲವು ಹವ್ಯಾಸಗಳನ್ನು ಹೊಂದಿರುವ ಪ್ರೊ. ಶೋಭಾ ಅವರು ಇತ್ತೀಚೆಗೆ ಹೆಚ್ಚಾಗಿ ಬರಹದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಬೆಳ್ಳಕ್ಕಿ ಹಿಂಡು, ಶರಣೆಯರ ಕಥಾಮಂಜರಿ, ನಗುತಾ ನಗುತಾ ಇರಬೇಕು, ಕೆಲವಂ ಬಲ್ಲವರಿಂದ ಕಲ್ಲು, ಬಸವ ದರ್ಶನ, ಯಾನಾಗುಂದಿ ಮಾಣಿಕಮ್ಮ, ಬೆಳಕಿನ ಕಿರಣಗಳು, ಬುದ್ಧ ದರ್ಶನ, ಸಾವಿರದ ಗಾದೆಗಳು, ಮಕ್ಕಳ ಫಲವ ಬೇಡ್ಯಾಳೆ, ಮಹಿಳಾ ಶೋಷಣೆ ಮತ್ತು ನಿವಾರಣೆ, ಮಾತೇ ಮುತ್ತು ಸೇರಿದಂತೆ ಅನೇಕ ಮೌಲಿಕ ಕೃತಿಗಳು ರಚಿಸಿದ್ದಾರೆ. ಇವರ ರಚನೆಯ ಅನೇಕ ಕೃತಿಗಳಿಗೆ ಗುಲಬರ್ಗ ವಿ.ವಿ., ವಿವಿಧ ಸಂಘ ಸಂಸ್ಥೆಗಳು, ಮಠ ಮಾನ್ಯಗಳು ರಾಜ್ಯಮಟ್ಟದ ಪ್ರಶಸ್ತಿಗಳೂ ಸಹ ಲಭಿಸಿವೆ.
ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ಕಲ್ಯಾಣಕುಮಾರ ಶೀಲವಂತ, ಸಿದ್ಧಲಿಂಗ ಬಾಳಿ, ಶಕುಂತಲಾ ಪಾಟೀಲ ಜಾವಳಿ, ಡಾ. ರೆಹಮಾನ್ ಪಟೇಲ್, ವಿನೋದಕುಮಾರ ಜೇನವೇರಿ, ಶಿವಾನಂದ ಪೂಜಾರಿ, ಧರ್ಮರಾಜ ಜವಳಿ, ಎಂ ಎನ್ ಸುಗಂಧಿ, ರಮೇಶ ಡಿ ಬಡಿಗೇರ, ಸಂದೀಪ ಭರಣಿ ಸೇರಿದಂತೆ ಅನೇಕರು ಈ ಆಯ್ಕೆ ಸಭೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
View Comments
ಪ್ರೊ. ಶೋಭಾದೇವಿ ಚೆಕ್ಕಿ ಯವರಿಗೆ ಹೃತ್ಪೂರ್ವಕ ಅಭಿನಂದನೆಗಳು.