ಸುರಪುರ: ಬಾಪೂಜಿ ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಯಿಂದ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ವಿಶೇಷವಾಗಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ,ಇಂದಿನ ಮಕ್ಕಳಿಗೆ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ,ತ್ಯಾಗ,ಬಲಿದಾನದ ಕುರಿತು ತಿಳಿಸಿಕೊಡಬೇಕು.ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನಿಸುವ ಮೂಲಕ ವಿಶೇಷವಾಗಿ ಆಚರಿಸುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಂಗಯ್ಯಸ್ವಾಮಿಯವರು ಸಾನಿಧ್ಯ ವಹಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಭಯ್ಯಸ್ವಾಮಿ, ಕಾಂತಪ್ಪ ಮ್ಯಾಕಲ್,ಮಲ್ಲಿಕಾರ್ಜುನ,ಗೃಹರಕ್ಷಕ ದಳದ ಸಿನಿಯರ್ ಫ್ಲಾಟೂನ್ ಕಮಾಂಡರ್ ಅವರು ಮಲ್ಲು ವಿಷ್ಣುಸೇನಾ ಸೇರಿದಂತೆ ಅನೇಕ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.
ಅಲ್ಲದೆ ಇದೇ ಸಂದರ್ಭದಲ್ಲಿ ವಿವಿಧ ಕಲಾ ತಂಡಗಳಿಂದ ಸಂಗೀತ ಕಾರ್ಯಕ್ರಮ ಜರುಗಿತು.ಸಂಸ್ಥೆಯ ಅಧ್ಯಕ್ಷ ಶರಣ ಅನಸೂರ ಅಧ್ಯಕ್ಷತೆ ವಹಿಸಿದ್ದರು,ಚಂದ್ರಶೇಖರ ದೊಡ್ಮನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…