ಶಹಾಬಾದ: ಬಾಲಕಿ ಮೇಲಿನ ಅತ್ಯಾಚಾರ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೆÇೀಕ್ರೂ) ನ್ಯಾಯಾಲಯವು ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ತಾಲ್ಲೂಕಿನ ನಿವಾಸಿಯಾದ ಅಜಯ ಈರಣ್ಣ ಶಿಕ್ಷೆಗೆ ಒಳಗಾದವರು. ಬಾಲಕಿಯನ್ನು ಪ್ರೀತಿಸುವುದಾಗಿ ಆಕೆಯ ಹಿಂದೆ ಬಿದಿದ್ದ ಅಜಯ, ಆಗಾಗ ಮಾತನಾಡುತ್ತಿದ್ದನು. ಬಾಲಕಿಯ ಪೆÇೀಷಕರ ಎಚ್ಚರಿಕೆಗೂ ಕಿವಿಗೊಡುತ್ತಿರಲಿಲ್ಲ.
2023ರ ಮೇ 17ರಂದು ತಿರುಪತಿ ದೇವಸ್ಥಾನ ತೋರಿಸುವುದಾಗಿ ಬಾಲಕಿಯನ್ನು ಪುಸಲಾಯಿಸಿದ ಅಜಯ, ಆಕೆಯನ್ನು ತಿರುಪತಿಗೆ ಕರೆದೊಯ್ದನು. ಕೆಲವು ದಿನ ತಿರುಪತಿ ದೇವಸ್ಥಾನವನ್ನು ಸುತ್ತಾಡಿಸಿದನು. ಆ ಬಳಿಕ ತಿರುಪತಿ- ಚೆನ್ನೈ ಬೈಪಾಸ್ ರಸ್ತೆ ಸಮೀಪದ ಕೋಣೆಯೊಂದಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಐದು ದಿನ ಅತ್ಯಾಚಾರಎಸಗಿದ್ದಾನೆ. ವಾಪಸ್ ಕರೆದುಕೊಂಡು ಬಂದು, ನಡೆದ ಕೃತ್ಯದ ಬಗ್ಗೆ ಮನೆಯವರಿಗೆ ತಿಳಿಸಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದ.
ಈ ಸಂಬಂಧ ಶಹಾಬಾದ್ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಐ ರಾಘವೇಂದ್ರ ಎಚ್.ಎಸ್. ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋμÁರೋಪ ಪಟ್ಟಿ ಸಲ್ಲಿಸಿದ್ದರು.ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ವಿಶೇಷ ಪೆÇೀಕ್ಸೋ) ಎಫ್‍ಟಿಎಸ್‍ಸಿ-1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು, ಅಜಯಗೆ ಪೆÇೀಕ್ಸೋ ಕಾಯ್ದೆಯ ವಿವಿಧ ಸೆಕ್ಷನ್‍ಗಳ ಅಡಿ 30 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ಡಿU. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 7 ಲಕ್ಷ ರೂ. ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…