ಬಿಸಿ ಬಿಸಿ ಸುದ್ದಿ

ಸುರಪುರ ಕಚೇರಿಯಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಿ ಕ್ರಮಕ್ಕೆ ಆಗ್ರಹ

ಸುರಪುರ: ಸತತ ಬರಗಾಲದಿಂದ ತತ್ತರಿಸಿದ ತಾಲೂಕಿನ ರೈತರಿಗೆ ಕಳೆದ ದಿನಗಳಿಂದ ಸುರಿದ ಮಳೆಯಿಂದಾಗಿ ಸ್ವಲ್ಪ ಮಟ್ಟಿಗೆ ನಿರಾಳವಾಗಿತು, ಈ ಮಳೆಗೆ ಶೇಂಗಾ ಬೆಳೆಯನ್ನು ಬೆಳೆದು ಬದುಕುವ ಆಸೆಯನ್ನು ಹೊಂದಿದ್ದ ರೈತರಿಗೆ ಕೃಷಿ ಇಲಾಖೆಯ ಅಧಿಕಾರಿಗಳು ಬೀಜ ವಿತರಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ನೋಡಿ ಹತಾಶರಾಗಿದ್ದಾರೆ. ಈಗಲಾದರು ಅಧಿಕಾರಿಗಳು ಎಚ್ಚತ್ತು ಬೀಜ ವಿತರಣೆಗೆ ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕರ ಆಗ್ರಹಿಸಿದರು.

ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಎದುರುಗಡೆ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು ಪ್ರತಿ ಬಾರಿಯು ಜಂಟಿ ನಿರ್ದೇಶಕರು ನಮ್ಮ ತಾಲೂಕಿನ ರೈತರ ಹಿತ ದೃಷ್ಠಿಕಾಯುವಲ್ಲಿ ನಿರ್ಲಕ್ಷ ವಹಿಸುತ್ತಿದ್ದಾರೆ ರೈತರು ಶೇಂಗಾ ಬೀಜ ಬಿತ್ತಲು ತಮ್ಮ ಜಮೀನನ್ನು ಹದಮಾಡಿ ಕುಳಿತುಕೊಂಡಿದ್ದಾರೆ ಮಳೆಯಿಂದಾಗಿ ಜಮೀನಿನಲ್ಲಿ ಇನ್ನು ತೇವಾಂಶವಿರುವುದರಿಂದ ಈಗ ಬಿತ್ತನೆಗೆ ಸದವಕಾಶ ಇತಂಹ ಸಮಯದಲ್ಲಿ ಬೀಜ ವಿತರಿಸಲು ವಿಳಂಬ ಮಾಡುತ್ತಿರುವುದು ಸರಿಯಲ್ಲ ತಕ್ಷಣವೆ ಬೀಜಗಳನ್ನು ವಿತರಿಸುವಂತೆ ಕ್ರಮವಹಿಸಲು ಆಗ್ರಹಿಸಿದರು.

ಹಿಂದೆ ಕರ್ತವ್ಯ ನಿರ್ವಹಿಸಿದ ಸುರಪುರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಸರ್ಕಾರದ ಅನುದಾನವನ್ನು ಲೂಟಿ ಹೊಡೆದು ರೈತರಿಗೆ ಮೋಸಮಾಡಿದ್ದರು ಸಹ ಅಧಿಕಾರಿಗಳು ಅವರ ಮೇಲೆ ಯಾವುದೆ ಕ್ರಮ ಜರುಗಿಸಿಲ್ಲ ರೈತರು ತಮ್ಮ ಜಮೀನಿನಲ್ಲಿ ನಿರ್ಮಿಸುವ ಕೃಷಿ ಹೊಂಡ ಇನ್ನಿತರರ ಯೋಜನೆಗಳನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಿ ಸರ್ಕಾರದ ಹಣ ಲೂಟಿ ಹೊಡೆದಿರುವುದರ ಕುರಿತು ಜಂಟಿ ನಿರ್ದೇಶಕರ ಗಮನಕ್ಕೆ ತಂದರು ಯಾವುದೆ ಪ್ರಯೋಜನವಾಗಿಲ್ಲ ಈಗ ಅವರನ್ನು ಇಲಾಖೆ ವರ್ಗಾವಣೆ ಮಾಡಿ ನಡೆದಿರುವ ಪ್ರಕರಣವನ್ನು ಮುಚ್ಚುಲು ಪ್ರಯತ್ನಿಸುತ್ತಾದ್ದರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಪ್ರತಿಭಟನಾಕಾರರ ಮನ ಒಲಿಸಲು ಸಹಾಯಕ ಕೃಷಿ ನಿರ್ದೇಶಕರು ಪ್ರಯತಿಸಿದರು ಸಹಾ ಜಂಟಿ ನಿರ್ದೇಶಕರು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆಯನ್ನು ಹಿಂದೆ ತೆಗೆದುಕೊಳ್ಳುವ ಮಾತಿಲ್ಲ ಎಂದು ಪಟ್ಟುಹಿಡಿದರು ಈ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ.ಆರ್ ಅವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ ಈ ಬಾರಿ ಬೀಜಗಳು ಬರುವುದು ತಡವಾಗಿದ್ದರಿಂದ ಈ ಸಮಸ್ಯೆಯಾಗಿದೆ ಕಳೆದ ವಾರ ಸುರಿದ ಮಳೆಯಿಂದಾಗಿ ಜಿಲ್ಲೆಗೆ ಬೀಜಗಳನ್ನು ತಲುಪಲು ವಿಳಂಬವಾಗುತ್ತಿದೆ ಬೀಜ ಪೂರೈಸುವ ಕಂಪನಿಯವರ ಜೋತೆ ಸತತವಾಗಿ ಸಂಪರ್ಕದಲ್ಲಿದ್ದೆವೆ ಮುಂದಿನವಾರದಲ್ಲಿ ಎಲ್ಲಾ ರೈತರಿಗೆ ಬೇಡಿಕೆಯಂತೆ ಬೀಜಗಳನ್ನು ಪೂರೈಸಲಾಗುವುದು ಹಾಗೂ ಹಿಂದೆ ನಡೆದ ಭ್ರಷ್ಠಾಚಾರದ ಕುರಿತು ಸಮಗ್ರ ವರದಿಯನ್ನು ತರೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೃಷಿ ಸಹಾಯಕ ನಿರ್ದೇಶಕ ದಾನಪ್ಪ ಕತ್ನಳ್ಳಿ, ಸಂಘದ ಗೌರವಾಧ್ಯಕ್ಷ ನಂದಣ್ಣ ವಾರಿ, ತಾಲೂಕು ಅಧ್ಯಕ್ಷ ಧರ್ಮಣ್ಣ ದೊರೆ, ಚಂದ್ರಾಮ ಗೌಡ, ಶಿವರಾಜ ಕರಿಗುಡ್ಡ, ರಾಮನಗೌಡ ಗುಗಲ್, ಪ್ರಕಾಶ ಕೋಳಿಹಾಳ, ಅಂಬ್ರಪ್ಪ ದೊರಿ, ಶಬ್ಬೀರ ಅಡ್ಡೊಡಗಿ, ಸೋಮಲಿಂಗಪ್ಪ ದೊರೆ ಚಂದ್ಲಾಪುರ, ಮಹಿಬೂಬು ಸುರಪುರ, ನಿಂಗಣ್ಣ ಸೇರಿದಂತೆ ಇನ್ನಿತರರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago