ಅಂನವಾಡಿ ಕೇಂದ್ರಗಳು ಮಕ್ಕಳಿಗೆ ಉತ್ತಮವಾದ ಕಲಿಕಾ ಪರಿಸರ ನಿರ್ಮಿಸಿವೆ; ಜಮಾದಾರ

ಸುರಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುರಪುರ ಹಾಗೂ ಅಜೀಮ್ ಪ್ರೇಮಜೀ ಫೌಂಡೇಷನ್ ಸಹಯೋಗದಲ್ಲಿ ರುಕ್ಮಾಪುರ ಗ್ರಾಮದ ಜಿಹ್ವೇಶ್ವರ ಕಲ್ಯಾಣ ಮಂಟಪದಲ್ಲಿ ಬಾಲಮೇಳ ಕಾರ್ಯಕ್ರಮವನ್ನು ನಡೆಸಲಾಯಿತು.’

ಕಾರ್ಯಕ್ರಮದಲ್ಲಿ ಅಜೀಮ್ ಪ್ರೇಮಜೀ ಫೌಂಡೆಷನನ್ ಸಂಪನ್ಮೂಲ ವ್ಯಕ್ತಿ ಅನ್ವರ ಜಮಾದಾರ ಮಾತನಾಡುತ್ತಾ, ಮೂರು ವರ್ಷದ ಬುದ್ಧಿ ನೂರು ವರುಷದತನಕ ಎಂಬಂತೆ, ಮಕ್ಕಳು ದೈಹಿಕವಾಗಿ, ಭೌಧ್ದಿಕವಾಗಿ ಬೆಳೆಯುವಲ್ಲಿ ಉತ್ತಮವಾಗಿರುವಂತಹ ಕಲಿಕಾ ಪರಿಸರ ಅಂಗನವಾಡಿಗಳಲ್ಲಿ ಲಭಿಸುವುದು ತುಂಬಾ ಮುಖ್ಯವಾಗಿದೆ. ಮಕ್ಕಳಿಗೆ ಆರಂಭಿಕ ದಿನಗಲ್ಲಿ ಕಲಿಕೆಗೆ ಸಿದ್ಧಗೊಳಿಸುವಂತಹ ವಾತಾವರಣ ನಿರ್ಮಿಸುವುದು ಅವಶ್ಯಕವಾಗಿದೆ. ರುಕ್ಮಾಪುರದ ಅಂಗನವಾಡಿ ಕೇಂದ್ರಗಳು ಮಕ್ಕಳಿಗೆ ತುಂಬಾ ಉತ್ತಮವಾದಂತಹ ಕಲಿಕಾ ಪರಿಸರವನ್ನು ನಿರ್ಮಾಣ ಮಾಡಿವೆ ಎಂದು ಅಭಿಪ್ರಾಯಪಟ್ಟರು.

ಅಂಗನವಾಡಿ ಮೇಲ್ವಿಚಾರಕಿಯಾದ ಸತ್ಯವತಿ ಮಾತನಾಡುತ್ತಾ, ಅಜೀಮ್ ಪ್ರೇಮಜೀ ಫೌಂಡೇಷನ ಸಹಯೋಗದಲ್ಲಿ ಅಂಗನವಾಡಿ ಮಕ್ಕಳಿಗಾಗಿ ಹಮ್ಮಿಕೊಂಡಿರುವ ಬಾಲಮೇಳ ಮಕ್ಕಳಲ್ಲಿ ಶಾಲಾ ಪೂರ್ವ ಶಿಕ್ಷಣಕ್ಕೆ ತುಂಬಾ ಒತ್ತು ನೀಡಿದೆ. ಬಹಳಷ್ಟು ಪಾಲಕರು, ಮಕ್ಕಳೊಂದಿಗೆ ಭಾಗವಹಿಸಿ ವಿವಿಧ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಿಪಡಿಸಿರುವುದು ಅತ್ಯಂತ ಸಂತೋಷವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗಾಮ ಪಂಚಾಯಿತಿ ಅಧ್ಯಕ್ಷರಾದ ನಿಂಗಣ್ಣ ಕವಡಿಮಟ್ಟಿ, ಮಾಜಿ ಅದ್ಯಕ್ಷೆ ಶರಣಮ್ಮ , ಗ್ರಾ ಪಂ ಸದಸ್ಯರಾದ ಯಂಕೋಬಾ ಮಾತನಾಡಿದರು. ಅಂಗನವಾಡಿ ಮೇಲ್ವಿಚಾರಕಿಯರಾದ ಪದ್ಮಾವತಿನಾಯಕ, ಚಂದ್ರಲೀಲಾ, ಅಂಗನವಾಡಿ ಶಿಕ್ಷಕಿಯರಾದ ಸಂಗೀತಾ, ಅಕ್ಕಮಹಾದೇವಿ, ಸರಸ್ವತಿ, ಜಯಶ್ರೀ, ವನಜಾಕ್ಷಿ, ಅಂಗನವಾಡಿ ಸಹಾಯಕಿಯರು, ಆಶಾ ಕಾಯಕರ್ತೆಯರು, ಅರೋಗ್ಯ ಇಲಾಖೆಯ ಸವಿತಾ ಲೋಖರೆ, ಮಾಲಾ ನಾಯಕ ಅಜೀಮ್ ಪ್ರೇಮಜೀ ಫೌಂಡೇಷನನ್ ಸಂಪನ್ಮೂಲ ವ್ಯಕ್ತಿಗಳಾದ ಚಂದನ, ಕೃಷ್ಣಯ್ಯ, ಅನುಷಾ, ಲಕ್ಷ್ಮೀಕಾಂತ ರುಕ್ಮಾಪುರ ಗ್ರಾಮದ ಪಾಲಕ ಪೋಷಕರು ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

4 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

7 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

13 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

14 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

14 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago