ಬಿಜೆಪಿ ಗೆಲುವು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ

ಅಳಂದ: ಎರಡು ರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತದಾರರು ಅಭೂತಪೂರ್ವ ಬೆಂಬಲ ನೀಡಿರುವುದಕ್ಕೆ ಆಳಂದ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ಬಗ್ಗೆ ಜನ ಉತ್ತಮ ಅಭಿಪ್ರಾಯ ಹೊಂದಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ ಅಲ್ಲದೇ ಜನ ಯಾವತ್ತೂ ಅಭಿವೃದ್ಧಿ ರಾಜಕಾರಣವನ್ನು ಬಯಸುತ್ತಾರೆ ಎನ್ನುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

ಕಣಿವೆ ರಾಜ್ಯದಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಕಂಡಿದೆ. ಹರ್ಯಾಣದಲ್ಲಿ ಎಲ್ಲರ ಲೆಕ್ಕಾಚಾರ ತಲೆ ಕೆಳಗೆ ಮಾಡಿ ಸತತ ಮೂರನೇ ಬಾರಿ ಅಧಿಕಾರ ಹಿಡಿಯುವ ಮೂಲಕ ಬಿಜೆಪಿ ಜನರ ವಿಶ್ವಾಸ ವೃದ್ಧಿಸಿಕೊಂಡಿದೆ.

“ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದಾದ್ಯಂತ ಡಬಲ್ ಇಂಜಿನ್ ಸರ್ಕಾರಗಳು ಗೆಲ್ಲುತ್ತಿವೆ. ಈ ಫಲಿತಾಂಶ ಮುಂಬರುವ ರಾಜ್ಯಗಳ ಫಲಿತಾಂಶದ ಮೇಲೂ ಪರಿಣಾಮ ಬೀರಲಿದೆ. ಮತದಾರರು ಪ್ರತಿಪಕ್ಷಗಳ ತುಷ್ಟೀಕರಣ ರಾಜಕಾರಣಕ್ಕಿಂತ ಬಿಜೆಪಿಯ ಅಭಿವೃದ್ಧಿ ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಇಟ್ಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago