ಸೇಡಂ ದಸರಾ ಉತ್ಸವದಲ್ಲಿಂದು ನಟಿ ಸಿತಾರಾ

ಸೇಡಂ; ಇಲ್ಲಿಯ ಶ್ರೀ ಪಂಚಲಿಂಗೇಶ್ವರ ದೇವಾಲಯದ್ಲಿ ನಡೆಯುತ್ತಿರುವ 43 ನೇ ವರ್ಷದ ದಸರಾ ಉತ್ಸವದಲ್ಲಿ ಅ. 10 ರಂದು ಗುರುವಾರ ಸಂಜೆ 7 ಕ್ಕೆ ಕಿರುತೆರೆ ಹಾಗೂ ಸಿನಿಮಾ ನಟಿ ಸಿತಾರಾ ಅವರು ಭಾಗವಹಿಸುವರು ಎಂದು ದೇವಾಲಯ ಕಮಿಟಿಯ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಹಳೇ ಬಜಾರದಲ್ಲಿರುವ ಐತಿಹಾಸಿಕ ಚಾಲುಕ್ಯ ಕಾಲದ ದೇವಾಲಯದಲ್ಲಿ ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ರಂಗಭೂಮಿ ಮತ್ತು ಸಿನಿಮಾ ಕ್ಷೇತ್ರದ ಪ್ರತಿಭಾನ್ವಿತ ನಟಿ ಸಿತಾರಾ ಅವರನ್ನು ಸತ್ಕರಿಸಲಾಗುವುದು. 2005 ರಲ್ಲಿ ವಿಶ್ವವಿಖ್ಯಾತ ಹೆಗ್ಗೋಡಿನ ನೀನಾಸಂನಲ್ಲಿ ರಂಗ ತರಬೇತಿಯಾಗಿದ್ದು, 2011 ರಲ್ಲಿ ಡ್ಯಾನ್ಸ್ ವಿಭಾಗದಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ.

ನೀನಾಸಂ ತಿರುಗಾಟದಲ್ಲಿ ನಾಲ್ಕು ವರ್ಷ ಅನುಭವ, ಎರಡು ವರ್ಷ ಡ್ಯಾನ್ಸ್ ವಿಭಾಗದಲ್ಲಿ ಕಾರ್ಪೋರೇಟ್ ಶೋಗಳನ್ನು ನೀಡಿದ್ದಾರೆ. 15 ಕಿರುಚಿತ್ರಗಳಲ್ಲಿ ನಟನೆ, 20 ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.

ಸಿತಾರಾ ಅವರು ಇದೂವರೆಗೆ ಏಳು ಪ್ರಶಸ್ತಿಗಳನ್ನು ಪಡೆದಿದ್ದು, ಅವುಗಳಲ್ಲಿ ಜೀ ಕನ್ನಡ ಚಾನೆಲ್ಲಿನಲ್ಲಿ ಎರಡು ಬಾರಿ ಬೆಸ್ಟ್ ಕಾಮಿಡಿಯನ್, ಉಡುಪಿ ರಂಗಭೂಮಿ ವತಿಯಿಂದ ಬೆಸ್ಟ್ ನಟಿ, ಇವಳೇ ವೀಣಾ ಪಾಣಿ ಎನ್ನುವ ಧಾರಾವಾಹಿಗೆ ಬೆಸ್ಟ್ ಆರ್ಟ್ ಡೈರೆಕ್ಟರ್, ಬೆಸ್ಟ್ ಕಾಸ್ಟ್ಯೂಮ್ ಡಿಸೈನರ್ ಪುರಸ್ಕಾರಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಇಂತಹ ಪ್ರತಿಭಾವಂತ ಕಲಾವಿದೆ ಸಿತಾರಾ ಅವರನ್ನು ದಸರಾ ಉತ್ಸವದಲ್ಲಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ನಂತರ ಕಲಬುರಗಿಯ ಸುಕಿ ಸಾಂಸ್ಕøತಿಕ ಸಂಸ್ಥೆಯ ವತಿಯಿಂದ `ಸಂಗೀತ ರಸಸಂಜೆ’ ಕಾರ್ಯಕ್ರಮ ನಡೆಯಲಿದೆ. ಕಿರಣ್ ಪಾಟೀಲ, ಶರಣು ಪಟ್ಟಣಶೆಟ್ಟಿ, ಪ್ರಕಾಶ ದಂಡೋತಿ, ಕವಿರಾಜ್ ನಿಂಬಾಳ, ಮಹೇಶ ನಿಪ್ಪಾಣಿ ಹಾಗೂ ಸಿ.ಎಸ್.ಮಾಲಿಪಾಟೀಲ ಅವರು `ಗಾನ ಸುಧೆ’ ಕಾರ್ಯಕ್ರಮವನ್ನು ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago