ದೆಹಲಿ: ಕನ್ನಡ ಸಾಹಿತ್ಯಕ್ಕೆ ಸುಮಾರು ೨೫ ಸಾವಿರ ವರ್ಷಗಳ ಇತಿಹಾಸವಿದ್ದು ಅದು ಶ್ರೀಮಂತಿಕೆಯಿ೦ದ ಕೂಡಿದೆ ಎಂದು ಕರ್ನಾಟಕ ಸರ್ಕಾರದ ಗ್ರಂಥಾಲಯ ಇಲಾಖೆಯ ಕಾರ್ಯದರ್ಶಿಗಳಾದ ಸತೀಶ್ ಹೊಸಮನಿ ಹೇಳಿದರು.
ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ಕಲಾ ಸಂಕುಲ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕನ್ನಡಿಗರ ನುಡಿ ಹಬ್ಬ ಹಾಗೂ ನಾಡಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ರೀಮತಿ ಶ್ಯಾಮಲಾ ಕುಂದಾ ಮಾತನಾಡಿ ಕರ್ನಾಟಕದ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ದೆಹಲಿಯಲ್ಲಿ ಎತ್ತಿ ಹಿಡಿದು ಪ್ರದರ್ಶನ ನೀಡುತ್ತಿರುವುದು ಕನ್ನಡ ಜನಕಪೂರಿ ಕೂಟದ ಕಾರ್ಯ ತುಂಬಾ ಶ್ಲಾಘನೀಯವಾದದ್ದು ಎಂದು ಹೇಳಿದರು.
ಶ್ರೀ ವನಕಲ್ಲು ಮಲ್ಲೇಶ್ವರ ಸುಕ್ಷೇತ್ರ ಹೆಗ್ಗು೦ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಾ: ಬಸವರಮಾನಂದ ಮಹಾಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸಿದ್ದರು,ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಡಾ: ವೆಂಕಟಾಚಲ ಹೆಗಡೆ ಅಧ್ಯಕ್ಷತೆ ವಹಿಸಿದ್ದರು, ಎನ್.ಆರ್. ಶ್ರೀನಾಥ್ ಪುಟ್ಟಗೌರಿ ಧಾರಾವಾಹಿ ಖ್ಯಾತಿಯ ನಟಿಯಾದ ಶ್ರೀಮತಿ ಮೀನಾ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಾಡಿನ ಸಾಧಕರಾದ ಡಾ: ಹುಸೇನ್ ಪೀರಾಪುರ, ಡಾ: ವಿಜಯಕುಮಾರ್ ಜಾನಪದ ಸಾಹಿತಿ ಬಸವರಾಜ್ ಗೊರ್ಜಿ ಹಲವಾರು ಜನರಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…