ಚಿತ್ತಾಪುರ; ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ವಿಧಾನಸಭೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಕಿರುಕುಳ, ಬ್ಲ್ಯಾಕ್ ಮೇಲ್ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಹೇಳಿದ್ದಾರೆ.
ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಹಾಬಾದ ಸಿಪಿಐ ನಟರಾಜ ಲಾಡೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ ಅವರ ವೃತ್ತಿಯಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆಯಿಲ್ಲ. ಆದರೆ ಮಣಿಕಂಠ ರಾಠೋಡ ಸುಳ್ಳು ಆರೋಪ ಮಾಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಕಲುಷಿತ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ಮಣಿಕಂಠ ಒಬ್ಬ ರೌಡಿಶೀಟರ್ ಹಾಗೂ ಗಡಿಪಾರಾದ ಈತ ಗುಂಡಾಗಳ ಪಡೆಕಟ್ಟಿಕೊಂಡು ಅಶಾಂತಿ ವಾತಾವರಣ ಮೂಡಿಸುತ್ತಿದ್ದಾರೆ.
ಚಿತ್ತಾಪುರ ಯಾವತ್ತು ಶಾಂತಿ ತಾಲೂಕಾಗಿದ್ದು, ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ಹಿಂದೆ ಪೊಲೀಸ್ ಕಮಿಷನರ್ ಸೇರಿದಂತೆ ಅನೇಕ ಪೋಲಿಸ್’ರ ವಿರುದ್ದವೂ ಸುಳ್ಳು ಆರೋಪ ಮಾಡಿದ ಉದಾಹರಣೆಗಳಿವೆ. ಆದ್ದರಿಂದ ದಕ್ಷ ಅಧಿಕಾರಿ ಸಿಪಿಐ ನಟರಾಜ ಲಾಡೆ ವಿರುದ್ಧ ಸುಳ್ಳು ಆರೋಪ ಮಾಡಿದ್ದು ಜನರು ನಂಬುವುದಿಲ್ಲ.
ಸುಳ್ಳು ಆರೋಪ ಮಾಡಿರುವ ಮಣಿಕಂಠ ರಾಠೋಡ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಮುಖಂಡರಾದ ಮಿಲಿಂದ ಸನಗುಂದಿ, ರಮೇಶ ಚಿಮ್ಮಾಇದಲಾಯಿ, ಕಲ್ಯಾಣರಾವ ಡೊಣ್ಣೂರ, ಬಸವರಾಜ ಹಾಳಕಾಯಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…