ಕಲಬುರಗಿ: ಮಂಡ್ಯದಲ್ಲಿ ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಪ್ರೇರಣೆ ಮೂಡಿಸುವ ನಿಟ್ಟಿನಲ್ಲಿ ಕನ್ನಡ ಜ್ಯೋತಿ ರಥ ನಾಳೆ (ಅ.11) ಬೆಳಗ್ಗೆ 8 ಗಂಟೆಗೆ ನಗರದ ಸರದಾರ ವಲ್ಲಭಬಾಯಿ ಪಟೇಲ್ ವೃತ್ತಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಜ್ಯೋತಿ ರಥವು ಅ.11 ರಂದು ಬೆಳಗ್ಗೆ 8 ಕ್ಕೆ ನಗರದ ಸರದಾರ ವಲ್ಲಭಬಾಯಿ ಪಟೇಲ್ ವೃತ್ತಕ್ಕೆ ಆಗಮಿಸುವ ಜ್ಯೋತಿ ರಥದ ಯಾತ್ರೆಯಲ್ಲಿ ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು, ಕನ್ನಡಪರ ಸಂಘಟಕರು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.
ಎಲ್ಲಾ ಕನ್ನಡದ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.