ಚಿತ್ತಾಪುರ; ಪಟ್ಟಣದ ಹೊರವಲಯದಲ್ಲಿರುವ ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾವನ್ನು ಕೆಲ ಕಿಡಿಗೇಡಿಗಳು ನಿನ್ನೆ ರಾತ್ರಿ ವೆಳೆ ಧ್ವಂಸಗೊಳಿಸಿರುವ ಘಟನೆ ಜರುಗಿದೆ.
ದರ್ಗಾದ ಗೇಟ್’ನ ಕೀಲಿ ಕೈ ಮುರಿದು ಸುತ್ತ ಕಟ್ಟಿದ ಕಟ್ಟೆ ಮತ್ತು ದರ್ಗಾದ ಮೇಲೆ ಸ್ಥಾಪಿಸಿದ ಗೋಪುರವನ್ನು ಧ್ವಂಸಗೊಳಿದ್ದಾರೆ.
ಹಿಂದು-ಮುಸ್ಲಿಂರ ಭಾವೈಕ್ಯತೆ ಹೊಂದಿರುವ ಸೈಯದ್ ಪೀರ್ ದರ್ಗಾವನ್ನು ಧ್ವಂಸಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ತೀರ್ವ ಚರ್ಚೆಗೆ ಗ್ರಾಸವಾಗಿ ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.
ಈ ರೀತಿ ದರ್ಗಾವನ್ನೆ ಗುರಿಯಾಗಿಸಿಟ್ಟಿಕೊಂಡು ದರ್ಗಾವನ್ನು ಧ್ವಂಸಗೊಳಿಸಿರುವುದು ಸರಿಯಲ್ಲ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿಯಾದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ದರ್ಗಾದ ಉಸ್ತುವಾರಿ ಸೈಯದ್ ಅವರು ಆಗ್ರಹಿಸಿದರು.
ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಪಿಎಸ್’ಐ ಶ್ರೀಶೈಲ್ ಅಂಬಾಟಿ, ಕ್ರೈಂ ಪಿಎಸ್’ಐ ಚಂದ್ರಾಮಪ್ಪ, ಸಿಬ್ಬಂದಿ ಬಸ್ಸು ರೆಡ್ಡಿ, ದತ್ತು ಸೇರಿದಂತೆ ದರ್ಗಾದ ಉಸ್ತುವಾರಿ ಸೈಯದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತ್ಯದ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…