ಕಲಬುರಗಿ: ಆಕಾಶವಾಣಿ ಕೇಂದ್ರವು ಅಕ್ಟೋಬರ್ 23ರಂದು ಬುಧವಾರ ಬೆಳಿಗ್ಗೆ 10.30 ರಿಂದ 11.30ರ ವರೆಗೆ ಕಲ್ಬುರ್ಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಎಸ್. ಡಿ ಅವರೊಂದಿಗೆ ನೇರ ಫೋನ್- ಇನ್ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ.
ಕಲಬುರಗಿ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಗಾಗಿ ಕೈಗೊಂಡ ಕ್ರಮಗಳು ಮತ್ತು ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಇಲಾಖೆಯು ಇಟ್ಟ ಹೆಜ್ಜೆಯ ಬಗ್ಗೆ ” ಸಂಚಾರ ಮತ್ತು ಕಾನೂನು ವ್ಯವಸ್ಥೆ”ಎಂಬ ವಿಷಯದ ಕುರಿತಾಗಿ ಪೊಲೀಸ್ ಆಯುಕ್ತರು ಕೇಳುಗರೊಂದಿಗೆ ಮುಕ್ತ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೇಳುಗರು ಸಂಚಾರ ಹಾಗೂ ಕಾನೂನು ವ್ಯವಸ್ಥೆಯ ಕುರಿತಾಗಿ ಸಮಸ್ಯೆ, ಸಲಹೆ ಸೂಚನೆಗಳಿದ್ದಲ್ಲಿ ಸಂವಾದದಲ್ಲಿ ಪ್ರಶ್ನೆಗಳನ್ನು ಕೇಳಿ ಪರಿಹಾರ ತಿಳಿದುಕೊಳ್ಳಬಹುದು. ಆಸಕ್ತ ಕೇಳುಗರು ಕಲ್ಬುರ್ಗಿ ಆಕಾಶವಾಣಿಯ ದೂರವಾಣಿ ಸಂಖ್ಯೆ 2 9 5 9 8 6 ಅಥವಾ 2 9 5 9 8 7 (ಎಸ್ ಟಿ ಡಿ ಸಂಖ್ಯೆ 08472)ಇವುಗಳಿಗೆ ಕರೆ ಮಾಡಿ ತಮ್ಮ ಪ್ರಶ್ನೆಗಳನ್ನು ಕೇಳಬಹುದು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾದ ಸೋಮಶೇಖರ್ ಎಸ್ ರುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…