ಶಹಾಪುರ : ಪ್ರಸ್ತುತ ದಿನಮಾನಗಳಲ್ಲಿ ಸರಿಯಾದ ಕ್ರಮದಲ್ಲಿ ಆಹಾರ ಸೇವಿಸಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳವುದು ಬಹಳ ಮುಖ್ಯ ಎಂದು ಕೀಲು ಎಲುಬು ಮೂಳೆಗಳ ತಜ್ಞ ಡಾ. ಶರಣಗೌಡ ಹೊನ್ನಗೋಳ ಹೇಳಿದರು.
ನಗರದ ಬಿ.ಬಿ ರಸ್ತೆಗೆ ಹೊಂದಿಕೊಂಡಿರುವ ಶ್ರೀ ಸಾಯಿ ಆಸ್ಪತ್ರೆ ಹಾಗೂ ಕರೋನ ರೆಮಡಿಸ್ ವತಿಯಿಂದ ಆಯೋಜಿಸಿದ (ಬಿ ಎಂ ಡಿ) ಬೋನ್,ಮಿನರಲ್,ಡೆನ್ಸಿಟಿ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ರೋಗಿಗಳ ತಪಾಸಣೆ ನಡೆಸಿ ಆರೋಗ್ಯದ ಕುರಿತು ಮಾತನಾಡಿದರು.
ಮನುಷ್ಯ ಆರೋಗ್ಯದ ಕಡೆಗೆ ಗಮನಕೊಡದೆ, ಒತ್ತಡದ ಯಾಂತ್ರಿಕ ಬದುಕಿನಲ್ಲಿ ಜೀವನ ಸಾಗಿಸುತ್ತಿದ್ದಾನೆ, ಇಂಥ ವ್ಯವಸ್ಥೆಯಿಂದಲೇ ಸಮಸ್ಯೆಗಳು ಉದ್ಬವಿಸುತ್ತವೆ,100 ರಲ್ಲಿ 80 ಜನರಿಗೆ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಕಂಡುಬರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ಉಚಿತ ತಪಾಸಣಾ ಶಿಬಿರದಲ್ಲಿ ಒಟ್ಟು 64 ಜನ ರೋಗಿಗಳು ತಪಾಸಣೆಗೆ ಒಳಗಾದರೂ ,ಇದರಲ್ಲಿ ಒಟ್ಟು 7 ಜನ ಗಂಭೀರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಯಿತು.
ಈ ಸಂದರ್ಭದಲ್ಲಿ ಕರೋನೋ ರೆಮಿಡೀಸ್ ಕಂಪನಿಯ ಪ್ರಾದೇಶಿಕ ಮುಖ್ಯಸ್ಥರಾದ ಗಣೇಶ್ ಕಡ್ಲ್ಯಾಯ್,ವೀರಭದ್ರಯ್ಯ ಹೈಯ್ಯಾಳ, ಚೌಡಪ್ಪ ಕೊಲ್ಲೂರ ಸೇರಿದಂತೆ ಇತರರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…