ಶಹಾಬಾದ: ಕಳೆದ ಒಂದು ತಿಂಗಳಿನಿಂದ ಮಳೆಯ ಪ್ರಮಾಣ ಹೆಚ್ಚಾದ ಪರಿಣಾಮ ರೈತರು ಜಮೀನುಗಳಲ್ಲಿ ನೀರು ಆವರಿಸಿದೆ.ಅಲ್ಲದೇ ತಾಲೂಕಿನಲ್ಲಿ ಇನ್ನೂ ಮಳೆ ಬರುವ ಸಾಧ್ಯತೆ ಇದ್ದು ನೀರು ಆವರಿಸಿರುವ ಜಮೀನುಗಳಲ್ಲಿ ಬಸಿಗಾಲುವೆ ಮಾಡಿ ನೀರನ್ನು ಹೊರ ಹಾಕಬೇಕೆಂದು ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಸ್ಯ (ಬೆಳೆಯ) ಚೇತರಿಕೆಗಾಗಿ 19:19:19 ಸಮ ಪ್ರಮಾಣದ ಗೊಬ್ಬರ ಹಾಗೂ ಲಘು ಪೆÇೀಷಕಾಂಶಗಳು ದ್ರಾವಣ 10 ಎಮ್ ಎಲ್/ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡಬೇಕು. ಅಲ್ಲದೆ 2024- 25 ನೇ ಸಾಲಿನ ಹಿಂಗಾರು ಬಿತ್ತನೆ ಬೀಜಗಳಾದ ಕಡಲೆ 5 ಜಿ 11 ಮತ್ತು ಜೋಳ ಎಸ್‍ಪಿವಿ-2217 ಬೀಜಗಳು ರಿಯಾಯಿತಿ ದರದಲ್ಲಿ ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿರುತ್ತದೆ.ಕಡ್ಡಾಯವಾಗಿ ಎಲ್ಲಾ ರೈತ ಬಾಂಧವರು ಬೀಜೋಪಚಾರ ಮಾಡಿ ಬಿತ್ತನೆ ಕೈಗೊಳ್ಳಬೇಕು. ಅಲ್ಲದೆ 2024- 25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರಿಗೆ ಶೇಕಡ 90ರಷ್ಟು ರಿಯಾಯಿತಿ ದರದಲ್ಲಿ ತುಂತುರು (ಸ್ಪ್ರೀಂಕ್ಲರ್)ಮತ್ತು ಲಘು (ಡ್ರಿಪ್) ನೀರಾವರಿ ಘಟಕಗಳು ಲಭ್ಯವಿದ್ದು, ಈಗಾಗಲೇ ಅರ್ಜಿ ಸಲ್ಲಿಸಿದ ಹಾಗೂ ಆಸಕ್ತ ರೈತರು ಅರ್ಜಿ ಸಲ್ಲಿಸಿ ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕಾಗಿ ರವೀಂದ್ರ ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…