ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಾಲಿಟೆಕ್ನಿಕ್ ಕಾಲೇಜು ಕಲಬುರ್ಗಿಯಲ್ಲಿ ಪ್ರತಿಷ್ಠಿತ ಟೋಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದರು.
ಈ ಕ್ಯಾಂಪಸ್ ಸಂದರ್ಶನದ ಡ್ರೈವ್ ನಲ್ಲಿ ಕಾಲೇಜಿನ 140 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದ್ದರು.ಭಾಗವಹಿಸಿದ ವಿದ್ಯಾರ್ಥಿಗಳ ಸಂದರ್ಶನ ಹಾಗೂ ಕೌಶಲ್ಯದ ಬಗ್ಗೆ ಕಂಪನಿಯವರು ಮೆಚ್ಚುಗೆ ವ್ಯಕ್ತಪಡಿಸಿದರು.ಸಂದರ್ಶನದಲ್ಲಿ ಭಾಗವಹಿಸಿದ ಕೌಶಲ್ಯ ಗಮನಿಸಿದಾಗ ಹೆಚ್ಚಿನ ವಿಧ್ಯಾರ್ಥಿಗಳು ಆಯ್ಕೆಯಾಗುವ ವಿಶ್ವಾಸವನ್ನು ಕಂಪನಿಯವರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಪಾಲಿಟೆಕ್ನಿಕ್ ಕಾಲೇಜಿನ ಸಂಯೋಜಕರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ ಮಹಾದೇವಪ್ಪ ರಾಂಪೂರೆ ಈ ಸಂದರ್ಶನಕ್ಕೆ ಚಾಲನೆ ನೀಡಿದರು.ಕಾಲೇಜಿನಲ್ಲಿ ನಡೆದ ಸಂದರ್ಶನಕ್ಕೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿಯವರು ಹಾಗೂ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಆಡಳಿತ ಮಂಡಳಿ ಸದಸ್ಯರು ದೂರವಾಣಿ ಮುಖಾಂತರ ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದಿನ ಈ ಸಂದರ್ಶನ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ರಾಜು ಗಲಗಲಿ, ಉಪ ಪ್ರಾಚಾರ್ಯರಾದ ಸಂಗಮೇಶ ನೀಲಾ, ಬಿ ಎಸ್ ಗೌರಿ, ರೋಹಿತ ಪಟ್ಟಣಶೆಟ್ಟಿ ಹಾಗೂ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…