ಬೆಂಗಳೂರು: ಇತ್ತೀಚೆಗಷ್ಟೇ ಹೆಬ್ಬೂರು ಹೋಬಳಿಯ ಸುಗ್ಗನ ಹಳ್ಳಿ ಕೆಂಕೆರೆ ಬಳಿಯ ತೋಟಕ್ಕೆ ತೆರಳುವ ಸಂದರ್ಭದಲ್ಲಿ ಕಾರು ಅಪಘಾತಕ್ಕೀಡಾದ ಕಾರಣ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ದಲಿತ ಹೋರಾಟಗಾರ, ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರಿಗೆ 65 ವರ್ಷ ವಯಸ್ಸಾಗಿತ್ತು.
ಇಂದು ಮಧ್ಯಾಹ್ನ ತುಮಕೂರಿಗೆ ಪಾರ್ಥಿವ ಶರೀರ ತಂದು, ಟೌನ್ ಹಾಲ್ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕ ಸಂಜೆ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…