ಜೇವರ್ಗಿ; ರೈತ ಸಂಪರ್ಕ ಕೇಂದ್ರ ಅಧಿಕಾರಿಗಳ ಮೇಲೆ ಕ್ರಮಕ್ಕೆ ಗಂವ್ಹಾರ ಆಗ್ರಹ

ಕಲಬುರಗಿ: ಯಡ್ರಾಮಿ ಹಾಗೂ ಜೇವರ್ಗಿ ರೈತರ ಸಂಪರ್ಕ ಕೇಂದ್ರಗಳ ಅಧಿಕಾರಿಗಳು ರೈತರಿಗೆ ವಿತರಿಸಬೇಕಾಗಿದ್ದ. ರಾಸಾಯನಿಕ ಬೆಳೆಗೆ ಸಿಂಪಡಿಸಬೇಕಾದ ಔಷಧಿಗಳು, ದಾಸ್ತಾನುಗಳು ಮತ್ತು ಸ್ಪಿಂಕ್ಲರ್ ಪೈಪುಗಳು, ಸರಕಾರಿ ನಿಯಮದ ಪ್ರಕಾರ ವಿತರಿಸದೇ ಸರಕಾರಿ ಧಾರಣಿಯ ಪ್ರಕಾರ ಮಾರಾಟ ಮಾಡದೇ ದುಡ್ಡು ಕೊಟ್ಟವರಿಗೆ ಮಾತ್ರ ವಿತರಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಸಹ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಎಸ್. ಗಂವ್ಹಾರ ಅವರು ಕೃಷಿ ಅಧಿಕಾರಿ ಸಮದ ಪಟೇಲ್ ಅವರಿಗೆ ಮನವಿ ಸಲ್ಲಿಸಿದರು.

ಅಧಿಕಾತಿಗಳಿಂದ ಮೋಸದ ಚಲ್ಲಾಟ ಆಡುತ್ತಿದ್ದಾರೆ. ರೈತರು ಈ ದೇಶದ ಬೆನ್ನೆಲುಬು ಎಂದು ಹೇಳಿಕೊಂಡು ರಾಜಕೀಯವರು ರಾಜ್ಯಭಾರ ಮಾಡುತ್ತಿದ್ದಾರೆ. ಆದರೆ ಇಲ್ಲಿನ ಅಧಿಕಾರಿಗಳು ರೈತರ ರಕ್ತ ಹೀರುತ್ತಿದ್ದಾರೆ. ಈ ಅಧಿಕಾರಿಗಳಿಗೆ ಹೇಳುವರು ಮತ್ತು ಕೇಳುವರು ಯಾರು ಇಲ್ಲದಂತಾಗಿದೆ ಎಂದು ದುರಿದ್ದಾರೆ.

ರೈತರಿಗೆ ಸರಿಯಾದ ಸಮಯಕ್ಕೆ ಸರಿಯಾದ ವಸ್ತುಗಳನ್ನು ನೀಡದೇ ಮತ್ತು ಸರಕಾರದ ದರವನ್ನು ಬಿಟ್ಟು ಹೆಚ್ಚಿನ ದರವನ್ನು ವಸೂಲಿ ಮಾಡಿ ರೈತರಿಗೆ ಮತ್ತು ಸರಕಾರಕ್ಕೆ ಮೋಸಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರೈತ ಸಂಪರ್ಕ ಕೇಂದ್ರಕ್ಕೆ ಸರಿಯಾದ ಸಮಯಕ್ಕೆ ಬರುವದಿಲ್ಲ. ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಕಾಲಹರಣ ಮಾಡುತ್ತಿರುವ ಈ ಅಧಿಕಾರಿಗಳ ಮೇಲೆ ಸೂಕ್ತವಾದ ಕ್ರಮವನ್ನು ತೆಗೆದುಕೊಳ್ಳಬೇಕು, ಗುಣಮಟ್ಟದ ಸಾಮಾಗ್ರಿಗಳನ್ನು ಮತ್ತು ರಾಸಾಯನಿಕ ವಸ್ತುಗಳನ್ನು ನೀಡಲು ಸೂಚನೆ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ವೇಂಕಟೇಶ ಪಟೇದಾರ, ಸಾಯಬಣ ಪೂಜಾರಿ, ಬನ್ನಯ್ಯಾ ಸ್ವಾಮಿ, ರಾಹುಲ ಇಜೇರಿ ಸೇರಿದಂತೆ ಇತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

24 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago