ಕಲಬುರಗಿಯಲ್ಲಿ 12ನೇ ರಾಜ್ಯಮಟ್ಟದ ಕದಳಿ ಸಮಾವೇಶ 26 ರಿಂದ

ಕಲಬುರಗಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಶನಿವಾರದಿಂದ ಎರಡು ದಿನಗಳ ಕಾಲ 12ನೇ ರಾಜ್ಯ ಮಟ್ಟದ ಕದಳಿ ಮಹಿಳಾ ಸಮಾವೇಶ ನಡೆಯಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನ ಹಿರಿಯ ಉಪಾಧ್ಯಕ್ಷ ಅಪ್ಪಾರಾವ ಅಕ್ಕೋಣೆ ಹಾಗೂ ಕದಳಿ ವೇದಿಕೆಯ ಜಿಲ್ಲಾಧ್ಯಕ್ಷೆ ಡಾ.‌ ಶಾಂತಾ ಅಸ್ಟಿಗೆ ತಿಳಿಸಿದರು.

ನಗರದ ಜೈಭವಾನಿ ಕನ್ವೆನ್ಷ್ ನ್ ಹಾಲ್ ನಲ್ಲಿ ಗುರುವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಸಾಹಿತಿ ಡಾ. ಮೀನಾಕ್ಷಿ ಬಾಳಿ ಸರ್ವಾಧ್ಯಕ್ಷತೆಯಲ್ಲಿ ಅ.26, 27ಎಂದು ಸಮಾವೇಶ ಜರುಗಲಿದ್ದು, ಸಮಾವೇಶಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯದ 30 ಜಿಲ್ಲೆಗಳಿಂದ ಸುಮಾರು 600 ಪ್ರತಿನಿಧಿಗಳು ಹಾಗೂ ಸ್ಥಳೀಯವಾಗಿ 400 ಜನ ಸೇರಿದಂತೆ 1000ಕ್ಕೂ ಹೆಚ್ಚು ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಜಯನಗರದ ಅನುಭವ ಮಂಟಪದಿಂದ ಜೈಭವಾನಿ ಕನ್ವೆನ್ಷ್ ನ್ ಹಾಲ್ ವರೆಗೆ ವಚನಗಳ ಕಟ್ಟು ಹಾಗೂ ಅಕ್ಕಮಹಾದೇವಿ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ವಚನ ಕಲಾಕೃತಿಗಳ ಪ್ರದರ್ಶನ ಮತ್ತು ಪುಸ್ತಕ ಮಳಿಗೆಗಳ ಉದ್ಘಾಟನೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ನೆರವೇರಿಸಲಿದ್ದಾರೆ ಎಂದರು.

ಶನಿವಾರ ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಶರಣಬಸವೇಶ್ವರ ಸಂಸ್ಥಾನದ ಚೇರ್ ಪರ್ಸ್ ನ್ ಡಾ. ದಾಕ್ಷಾಯಿಣಿ ಶರಣಬಸಪ್ಪ ಅಪ್ಪ ಉದ್ಘಾಟಿಸಲಿದ್ದಾರೆ.

ಮೈಸೂರಿನ ಸುತ್ತೂರು ಶಿವರಾತ್ರಿ ದೇಶಿಕಕೇಂದ್ರ ಮಹಾಸ್ವಾಮಿಗಳು, ಗದಗನ ಡಾ. ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮಿಗಳು, ಸುಲಫಲಮಠ ಹಾಗೂ ಶ್ರೀಶೈಲಂ ಸಾರಂಗಮಠದ ಡಾ. ಜಗದ್ಗುರು ಸಾರಂಗಧರ ದೇಶಿಕೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಮ್ಮೇಳನದ ಸಿದ್ಧತೆಗಾಗಿ ಸ್ವಾಗತ ಸಮಿತಿ, ಮೆರವಣಿಗೆ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ, ಪ್ರಚಾರ ಸಮಿತಿ, ಮೆರವಣಿಗೆ ಸಮಿತಿಗಳನ್ನು ಮಾಡಿಕೊಳ್ಳಲಾಗಿದೆ. ನಾಲ್ಕು ಪ್ರಮುಖ ಗೋಷ್ಠಿ, ಮಹಾದ್ವಾರ ಗಳಿಗೆ ಎಲ್ಹೇರಿ ಅಕ್ಕಮ್ಮ, ದುಗ್ಗಳೆ, ಜಯದೇವಿತಾಯಿ ಲಿಗಾಡೆ ಮುಂತಾದ ಸ್ಥಳೀಯ ಶರಣೆಯರ ಹೆಸರನ್ನು ಇಡಲಾಗಿದೆ. ಮುಖ್ಯ ವೇದಿಕೆಗೆ ಅಕ್ಕಮಹಾದೇವಿ, ಮಹಾದಾಸೋಹಿ ಶರಣಬಸವೇಶ್ವರ ಮಂಟಪ ಎಂದು ಹೆಸರಿಡಲಾಗಿದೆ ಎಂದು ಹೇಳಿದರು.

ಕಲ್ಯಾಣ ಕದಳಿ, ಅಕ್ಕ ಕೇಳವ್ವ ಎಂಬ ಎರಡು ಸ್ಮರಣ ಸಂಚಿಕೆ, ಶರಣ ಪ್ರಸಾದ, 63 ಪುರಾತನರ ಚಿತ್ರಪಟಗಳು, ವಚನ ನಿದರ್ಶನ, ಜಡದಲ್ಲಿ ಜಂಗಮ ಸೇರಿ ಒಟ್ಟು 6 ಕೃತಿಗಳು ಬಿಡುಗಡೆಯಾಗಲಿವೆ ಎಂದರು.

ಜಿಲ್ಲಾಧ್ಯಕ್ಷೆ ಡಾ.‌ ಮಲ್ಲಿಕಾರ್ಜುನ ವಡ್ಡನಕೇರಿ, ಪ್ರಧಾನ ಕಾರ್ಯದರ್ಶಿ ಶಾಂತಲಿಂಗ ಪಾಟೀಲ ಕೋಳಕೂರ,
ಜಯಶ್ರೀ ಚಟ್ನಳ್ಳಿ, ಬಸವರಾಜ ಮೊರಬದ ಇತರರಿದ್ದರು.

ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಸಮಾವೇಶ ನಡೆಯುತ್ತಿದೆ. ಸ್ತ್ರೀ ಸಮಾನತೆ ಬಗ್ಗೆ ಜಾಗೃತಿ ಮೂಡಿಸುವುದು ಸಮಾವೇಶದ ಉದ್ದೇಶವಾಗಿದೆ. ವಿದ್ವಾಂಸರು, ಮಠಾಸದೀಶರು, ರಾಜಕೀಯ ಧುರೀಣರು ಭಾಗವಹಿಸಲಿದ್ದಾರೆ. -ಡಾ.‌ ಮಲ್ಲಿಕಾರ್ಜುನ ವಡ್ಡನಕೇರಿ, ಜಿಲ್ಲಾಧ್ಯಕ್ಷರು, ಶರಣ ಸಾಹಿತ್ಯ ಪರಿಷತ್, ಕಲಬುರಗಿ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

17 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago