ಸುರಪುರ: ತಾಲ್ಲೂಕಿನ ಅರಕೇರಾ (ಕೆ) ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ತಾಲ್ಲೂಕು ಘಟಕದ ಮುಖಂಡರು ಆಗ್ರಹಿಸಿದರು.
ನಗರದ ತಾಲ್ಲೂಕ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿದ ಸಂಘದ ತಾಲ್ಲೂಕ ಅಧ್ಯಕ್ಷ ವೆಂಕಟೇಶ ನಾಯಕ ಪ್ಯಾಪ್ಲಿ,ಅರಕೇರಾ ಕೆ ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿಲ್ಲದ್ದರಿಂದ ರಸ್ತೆ ಮೇಲೆ ನೀರು ಹರಿದು ಜನರಿಗೆ ತುಂಬಾ ತೊಂದರೆಯಾಗುತ್ತಿದೆ.ಮಹಿಳಾ ಶೌಚಾಲಯ ಇಲ್ಲದ್ದರಿಂದ ಮಹಿಳೆಯರಿಗೆ ತುಂಬಾ ಸಮಸ್ಯೆ ಇದ್ದು ಮಹಿಳಾ ಶೌಚಾಲಯ ನಿರ್ಮಿಸಿ ಕೊಡಬೇಕು ಹಾಗೂ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಅಗತ್ಯವಿದ್ದು ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಬೇಕು.ಒಂದು ವೇಳೆ ನಮ್ಮ ಮನವಿಗೆ ಸ್ಪಂಧಿಸದಿದ್ದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ತಾಲ್ಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ತಾಲ್ಲೂಕ ಕಾರ್ಯದರ್ಶಿ ಅಮರೇಶ ನಾಯಕ ಮಾವಿನಮಟ್ಟಿ,ನಾಗರಾಜ ಯಾದವ್,ರಾಕೇಶ ಉಪ್ಪಾರ್,ವೇಣುಗೋಪಾಲ ಪ್ಯಾಪ್ಲಿ,ಶ್ರೇಯಸ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.