ಚಿತ್ತಾಪುರ: ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರು ತಮ್ಮ ನಡತೆಯಲ್ಲಿ ಸುಧಾರಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದರು.
ತಾಲೂಕಿನ ಮಾಡಬೂಳ ಪೊಲೀಸ್ ಠಾಣೆ ಆವರಣದಲ್ಲಿ ಮಾಡಬೂಳ, ಚಿತ್ತಾಪುರ, ವಾಡಿ, ಶಹಾಬಾದ್, ಕಾಳಗಿ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ಈ ಹಿಂದೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರ ಪರೇಡ್ ನಡೆಸಿದ ಅವರು, ಈ ಹಿಂದೆ ಅಪರಾಧ ಚಟುವಟಿಕೆ ನಡೆಸಿ ಆರೋಪಿಗಳಾದವರು, ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ಪೊಲೀಸ್ ಇಲಾಖೆಯಿಂದ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಅಪರಾಧ ಚಟುವಟಿಕೆಗಳಿಂದ ಸಮಾಜದಲ್ಲಿ ನಿಮ್ಮ ವೈಯಕ್ತಿಕ ಗೌರವ ಹಾಳಾಗುವುದರ ಜೊತೆಗೆ ನಿಮ್ಮ ಕುಟುಂಬದ ಗೌರವ ಹಾಳಾಗುತ್ತದೆ. ನಿಮ್ಮ ಕುಟುಂಬದವರು ಸಮಾಜದಲ್ಲಿ
ಮುಜುಗರ, ಅವಮಾನ ಅನುಭವಿಸಬೇಕಾಗುತ್ತದೆ. ಸಮಾಜದಲ್ಲಿ ಗೌರವದ ಜೀವನ ನಡೆಸಬೇಕಾದರೆ ಅಪರಾಧ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಹೇಳಿದರು.
ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವುದು, ಸಾಕ್ಷಿಗಳಿಗೆ ಹೆದರಿಸುವುದು ಮಾಡಬಾರದು. ಪ್ರಕರಣದ ಕುರಿತು ದ್ವೇಷ ಇಟ್ಟುಕೊಂಡು ಪರಸ್ಪರ ಜಗಳ ಹಚ್ಚುವುದಾಗಲಿ, ಜಗಳ ಮಾಡುವುದಾಗಲಿ ಮಾಡಬಾರದು. ಕುಟುಂಬದ ನೆಮ್ಮದಿ, ಸಂತೋಷದ ಬದುಕಿನ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ತಾಕೀತು ಮಾಡಿದರು.
ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ 200ಕ್ಕೂ ಅಧಿಕ ಸಂಖ್ಯೆಯಲ್ಲಿ ಹಾಜರಿದ್ದ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರ ಪ್ರಸ್ತುತ ಜೀವನ ಕ್ರಮ, ಮಾಡುತ್ತಿರುವ ಉದ್ಯೋಗ, ಅಪರಾಧ ಚಟುವಟಿಕೆಯಲ್ಲಿ ಮತ್ತೆ ಭಾಗಿಯಾದವರ, ಭಾಗಿಯಾಗದೆ ಇರುವವರ ಚಲನವಲನದ ಮೇಲೆ ಮೇಲೆ ನಿಗಾವಹಿಸಬೇಕು. ಅವರ ಜೀವನ ಕ್ರಮದಲ್ಲಿ ಸುಧಾರಣೆ ಮಾಡಿಕೊಂಡಿರುವವರ ಕುರಿತು ಮಾಹಿತಿ ನೀಡುವಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಎಸ್‌ಪಿ ಸೂಚಿಸಿದರು.
ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಕಾಳಗಿ ಸಿಪಿಐ ಜಗದೇವಪ್ಪಾ ಪಾಳಾ, ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ, ಶಹಾಬಾದ್ ಪಿಎಸ್’ಐ ನಟರಾಜ್ ಲಾಡೆ, ಮಾಡಬೂಳ ಪಿಎಸ್‌ಐ ಚೇತನ್ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…